ನವದೆಹಲಿ: ಹಿಂದುಗಳ ಪವಿತ್ರ ಯಾತ್ರೆಗಳಲ್ಲಿ ಒಂದಾದ ಅಮರನಾಥ ಯಾತ್ರೆ ಇಂದಿನಿಂದ ಆರಂಭಗೊಂಡಿದೆ. ಬಿಗಿ ಭದ್ರತೆಯ ನಡುವೆ ಕಾಶ್ಮೀರ ಕಣಿವೆಯ ಪಹಲ್ಗಾಮ್ ಮತ್ತು ಬಲ್ಟಾಲ್ ಮಾರ್ಗಗಳಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭಗೊಂಡಿದೆ.
ನಿನ್ನೆ ಮುಂಜಾನೆ 4:30 ರ ಸುಮಾರಿಗೆ ಬೇಸ್ ಕ್ಯಾಂಪ್ನಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ ನಂತರ ಮಂತ್ರಗಳ ಪಠಣದ ನಡುವೆ ಮೊದಲ ಬ್ಯಾಚ್ ಅನ್ನು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಔಪಚಾರಿಕವಾಗಿ ಬೀಳ್ಕೊಟ್ಟರು. ಇಂದು ಯಾತ್ರೆ ಪಹಲ್ಗಾಮ್ ಮತ್ತು ಬಲ್ಟಾಲ್ ಮಾರ್ಗಗಳಿಂದ ಆರಂಭವಾಗಿದೆ.
ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ವರ್ಷಗಳಿಂದ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಈ ಯಾತ್ರಿಕರಲ್ಲಿ ಭಾರಿ ಉತ್ಸಾಹ ಕಂಡುಬರುತ್ತಿದೆ. 45 ದಿನಗಳ ಕಾಲ ಯಾತ್ರೆ ನಡೆಯಲಿದೆ.
ಈ ಬಾರಿಯ ಅಮರನಾಥ ಯಾತ್ರೆಗೆ ಭಾರೀ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾಕಷ್ಟು ಸಂಖ್ಯೆಯ ಸಿಆರ್ಪಿಎಫ್, ರಾಜ್ಯ ಪೊಲೀಸರು ಮತ್ತು ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ಜಮ್ಮು ನಗರದಲ್ಲಿ ಮತ್ತು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಮತ್ತು ಪಠಾಣ್ಕೋಟ್-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯೋಜಿಸಲಾಗಿದೆ. ಜಮ್ಮು ಬೇಸ್ ಕ್ಯಾಂಪ್ನಿಂದ ಶ್ರೀನಗರಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುವ ವಾಹನಗಳ ಬೆಂಗಾವಲು ಬಲಿಷ್ಠವಾಗಿದೆ.
ಅಮರನಾಥ ಯಾತ್ರಾರ್ಥಿಗಳ ರಕ್ಷಣೆ, ಸುರಕ್ಷತೆ ಮತ್ತು ಭದ್ರತೆಯ ಸಲುವಾಗಿ ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಯಾವುದೇ ಯಾತ್ರಿಗಳಿಗೆ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳಲು ಅವಕಾಶ ನೀಡದಿರಲು ನಿರ್ಧರಿಸಿದೆ.
ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದಲ್ಲಿ, ಆರೋಗ್ಯ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ದ್ವಿವೇದಿ ಅವರು ಇಂದು ಶ್ರೀ ಅಮರನಾಥ ಯಾತ್ರೆ 2022 ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಆರೋಗ್ಯ ರಕ್ಷಣಾ ಸೌಲಭ್ಯಗಳನ್ನು ಪತ್ತೆಹಚ್ಚಲು ಮೊಬೈಲ್ ಅಪ್ಲಿಕೇಶನ್ “yatra22” ಮತ್ತು ವೆಬ್ಪುಟ www.yatra22.com ಅನ್ನು ಪ್ರಾರಂಭಿಸಿದರು. ತುರ್ತು ಸಂದರ್ಭಗಳಲ್ಲಿ ಆರೋಗ್ಯ ಸೌಲಭ್ಯಗಳ ಗುರುತಿಸುವಿಕೆ ಮತ್ತು ಟ್ರ್ಯಾಕಿಂಗ್ ಅನ್ನು ಸುಲಭಗೊಳಿಸುತ್ತದೆ. ಅಪ್ಲಿಕೇಶನ್ Google Play Store ಮತ್ತು IOS ಪ್ಲಾಟ್ಫಾರ್ಮ್ನಲ್ಲಿ ಲಭ್ಯವಿದೆ ಮತ್ತು ವೆಬ್ ಬ್ರೌಸರ್ ಮೂಲಕವೂ ಪ್ರವೇಶಿಸಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.