ಬೆಂಗಳೂರು: ವೃಕ್ಷಮಾತೆ ಎಂದು ಕರೆಯಲ್ಪಡುವ ಸಾಲುಮರದ ತಿಮ್ಮಕ್ಕ ಅವರಿಗೆ ರಾಜ್ಯ ಸರಕಾರ ಮಹತ್ವದ ಗೌರವವನ್ನು ನೀಡಲು ಮುಂದಾಗಿದೆ.
ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜೊತೆಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ.
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಇಂದು ನಡೆದ ಸಾಲುಮರದ ತಿಮ್ಮಕ್ಕ ಅವರ 111ನೇ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರಧಾನ ಸಮಾರಂಭದಲ್ಲಿ ಭಾಗಿಯಾದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದ್ದಾರೆ.
ರಾಜ್ಯದ್ಯಂತ ಪರಿಸರ ರಕ್ಷಣೆಯ ಬಗ್ಗೆ ಪ್ರಚಾರ ಮಾಡುವ ಸಲುವಾಗಿ ತಿಮ್ಮಕ್ಕ ಅವರಿಗೆ ಈ ಸ್ಥಾನಮಾನವನ್ನು ನೀಡಲಾಗುತ್ತಿದೆ. ಅವರು ಹೊರ ರಾಜಕ್ಕೆ ತೆರಳಿದರೆ ಸರ್ಕಾರದ ವತಿಯಿಂದಲೇ ವೆಚ್ಚ ಭರಿಸಲಾಗುತ್ತದೆ. ವಾರ್ತಾ ಇಲಾಖೆಯಿಂದ ಸಾಲುಮರದ ತಿಮ್ಮಕ್ಕ ಅವರ ವೆಬ್ ಸಿರೀಸ್ ಮಾಡಲಾಗುತ್ತದೆ. ವೃಕ್ಷ ಮಾತೆಗೆ ಬೇಲೂರಿನಲ್ಲಿ 10 ಎಕರೆ ಭೂಮಿ ಮಂಜೂರು ಮಾಡಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.
ಅಲ್ಲದೆ ಈಗಾಗಲೇ ಬೆಂಗಳೂರಿನಲ್ಲಿ ಅವರಿಗೆ ಬಿಡಿಎ ನಿವೇಶನ ನೀಡಲಾಗಿದೆ. ಆ ನಿವೇಶನದಲ್ಲಿ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.