ನವದೆಹಲಿ: ಜುಲೈ 1 ಅನ್ನು ಚಾರ್ಟರ್ಡ್ ಅಕೌಂಟೆಂಟ್ಸ್ ದಿನವಾಗಿ ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಆರ್ಥಿಕತೆಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ಗಳ ಪಾತ್ರವನ್ನು ಶ್ಲಾಘಿಸಿದ್ದಾರೆ ಮತ್ತು ಅವರು ದೇಶದ ಬೆಳವಣಿಗೆ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಶ್ರಮಿಸುತ್ತಾರೆ ಎಂದು ಆಶಿಸಿದ್ದಾರೆ.
ಸಂಸತ್ತಿನ ಕಾಯಿದೆಯಡಿಯಲ್ಲಿ 1949 ರಲ್ಲಿ ಸ್ಥಾಪಿಸಲಾದ ಶಾಸನಬದ್ಧ ಸಂಸ್ಥೆಯಾದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಸಂಸ್ಥಾಪನಾ ದಿನವನ್ನು ಗುರುತಿಸಲು ಚಾರ್ಟರ್ಡ್ ಅಕೌಂಟೆಂಟ್ಸ್ ದಿನವನ್ನು ಪ್ರತಿ ವರ್ಷ ಆಚರಣೆ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಇಡೀ ದೇಶ ಸಿಎಗಳ ಕೊಡುಗೆಯನ್ನು ಸ್ಮರಿಸುತ್ತಿದೆ.
“ನಮ್ಮ ಆರ್ಥಿಕತೆಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಪ್ರಮುಖ ಪಾತ್ರವನ್ನು ಹೊಂದಿದ್ದಾರೆ. ಸಿಎ ದಿನದಂದು, ಎಲ್ಲಾ ಚಾರ್ಟರ್ಡ್ ಅಕೌಂಟೆಂಟ್ಗಳಿಗೆ ಶುಭಾಶಯಗಳು” ಎಂದು ಮೋದಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
“ಆರ್ಥಿಕತೆಯ ಬೆಳವಣಿಗೆ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಅವರು ಶ್ರಮಿಸುತ್ತಿರಲಿ” ಎಂದು ಪ್ರಧಾನಿ ಹಾರೈಸಿದ್ದಾರೆ.
A Chartered Accountant has an important role in our economy. On CA Day, best wishes to all Chartered Accountants. May they keep working hard in furthering growth and transparency in the economy. pic.twitter.com/TDtyxefIYP
— Narendra Modi (@narendramodi) July 1, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.