ನವದೆಹಲಿ: ಜಿಎಸ್ಟಿ ಸಂಗ್ರಹದಲ್ಲಿ ಸ್ಥಿರವಾದ ಏರಿಕೆ ಕಂಡುಬಂದಿದೆ ಮತ್ತು ಜೂನ್ 2022 ರಲ್ಲಿ ಸಂಗ್ರಹಣೆಗಳು ಶೇಕಡಾ 56 ರಷ್ಟು ಏರಿಕೆಯಾಗಿ 1.44 ಲಕ್ಷ ಕೋಟಿ ರೂಪಾಯಿಗಳಿಗೆ ತಲುಪಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಇಂದು ನವದೆಹಲಿಯಲ್ಲಿ ನಡೆದ 5 ನೇ ಜಿಎಸ್ಟಿ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಸೀತಾರಾಮನ್, 1.40 ಲಕ್ಷ ಕೋಟಿ ರೂಪಾಯಿಗಳು ವಿಸ್ತೃತ ಬಾಟಮ್ ಲೈನ್ ಆಗಿದ್ದು, ಮಾಸಿಕ ಜಿಎಸ್ಟಿ ಸಂಗ್ರಹಗಳು ಇದಕ್ಕಿಂತ ಕಡಿಮೆ ಆಗುವುದಿಲ್ಲ. ಈ ವರ್ಷದ ಏಪ್ರಿಲ್ ನಂತರ ಜೂನ್ನ ಒಟ್ಟು ಜಿಎಸ್ಟಿ ಸಂಗ್ರಹವು ಎರಡನೇ ಅತಿ ಹೆಚ್ಚು ಸಂಗ್ರಹವಾಗಿದೆ ಎಂದು ಅವರು ಹೇಳಿದರು.
ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಮಾತನಾಡಿ, ಜಿಎಸ್ಟಿ ತೆರಿಗೆ ವ್ಯವಸ್ಥೆಯಲ್ಲಿ ಸುಧಾರಣೆ ತಂದಿದೆ. ಒನ್ ನೇಷನ್ ಒನ್ ಟ್ಯಾಕ್ಸ್ ಕಲ್ಪನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ತೆರಿಗೆದಾರರು ಮತ್ತು ಅಧಿಕಾರಿಗಳಿಗೆ ಅಭಿನಂದನೆಗಳು ಎಂದರು.
2017ರ ಜುಲೈ 1ರಿಂದ ಸರಕು ಮತ್ತು ಸೇವಾ ತೆರಿಗೆ (ಜಾಎಸ್ಟಿ) ಅನುಷ್ಠಾನಕ್ಕೆ ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.