ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಪ್ರಾತ್ಯಕ್ಷಿಕೆಯ ಮೊದಲ ಹಾರಾಟವನ್ನು ಯಶಸ್ವಿಯಾಗಿ ನಡೆಸಿದೆ.
ಮಾನವ ರಹಿತ ಯುದ್ಧ ವಿಮಾನದ ಈ ಹಾರಾಟವನ್ನು ಇಂದು ಕರ್ನಾಟಕದ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ನಲ್ಲಿ ನಡೆಸಲಾಯಿತು ಎಂದು ಡಿಆರ್ಡಿಒ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
“ಸಂಪೂರ್ಣ ಸ್ವಾಯತ್ತ ಮೋಡ್ನಲ್ಲಿ ಕಾರ್ಯನಿರ್ವಹಿಸಿದ ವಿಮಾನವು ಟೇಕ್-ಆಫ್, ವೇ ಪಾಯಿಂಟ್ ನ್ಯಾವಿಗೇಷನ್ ಒಳಗೊಂಡಂತೆ ಪರಿಪೂರ್ಣ ಹಾರಾಟವನ್ನು ಪ್ರದರ್ಶಿಸಿತು. ಭವಿಷ್ಯದ ಮಾನವರಹಿತ ವಿಮಾನಗಳ ಅಭಿವೃದ್ಧಿಗೆ ನಿರ್ಣಾಯಕ ತಂತ್ರಜ್ಞಾನಗಳನ್ನು ಸಾಬೀತುಪಡಿಸುವ ವಿಷಯದಲ್ಲಿ ಈ ಹಾರಾಟವು ಪ್ರಮುಖ ಮೈಲಿಗಲ್ಲಾಗಿ ಮತ್ತು ಅಂತಹ ಕಾರ್ಯತಂತ್ರದ ರಕ್ಷಣಾ ತಂತ್ರಜ್ಞಾನಗಳಲ್ಲಿ ಸ್ವಾವಲಂಬನೆಯತ್ತ ಮಹತ್ವದ ಹೆಜ್ಜೆಯಾಗಿದೆ” ಎಂದು ಡಿಆರ್ಡಿಓ ಹೇಳಿಕೆಯಲ್ಲಿ ತಿಳಿಸಿದೆ.
ಡಿಆರ್ಡಿಒ ಅಡಿಯಲ್ಲಿನ ಪ್ರಮುಖ ಸಂಶೋಧನಾ ಪ್ರಯೋಗಾಲಯವಾದ ಬೆಂಗಳೂರು ಮೂಲದ ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ (ಎಡಿಇ) ಇದನ್ನು ವಿನ್ಯಾಸಗೊಳಿಸಿದೆ ಮತ್ತು ಅಭಿವೃದ್ಧಿಪಡಿಸಲಾಗಿದೆ. ಈ ಮಾನವರಹಿತ ಯುದ್ಧ ವಿಮಾನವು ಸಣ್ಣ, ಟರ್ಬೋಫ್ಯಾನ್ ಎಂಜಿನ್ನಿಂದ ಚಾಲಿತವಾಗಿದೆ.
ವಾಹನದ ಏರ್ಫ್ರೇಮ್, ಅದರ ಅಂಡರ್ಕ್ಯಾರೇಜ್, ಫ್ಲೈಟ್ ಕಂಟ್ರೋಲ್ಗಳು ಮತ್ತು ಏವಿಯಾನಿಕ್ಸ್ ಸಿಸ್ಟಮ್ ಅನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿದೆ.
ಡಿಆರ್ಡಿಒಗೆ ಅಭಿನಂದನೆ ಸಲ್ಲಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಚಿತ್ರದುರ್ಗ ಎಟಿಆರ್ನಿಂದ ಸ್ವಾಯತ್ತ ಫ್ಲೈಯಿಂಗ್ ವಿಂಗ್ ಟೆಕ್ನಾಲಜಿ ಡೆಮಾನ್ಸ್ಟ್ರೇಟರ್ನ ಯಶಸ್ವಿ ಚೊಚ್ಚಲ ಹಾರಾಟಕ್ಕಾಗಿ ಡಿಆರ್ಡಿಓಗೆ ಅಭಿನಂದನೆಗಳು. ಇದು ಸ್ವಾಯತ್ತ ವಿಮಾನಗಳ ಕಡೆಗೆ ಒಂದು ಪ್ರಮುಖ ಸಾಧನೆಯಾಗಿದೆ, ಇದು ನಿರ್ಣಾಯಕ ಮಿಲಿಟರಿ ವ್ಯವಸ್ಥೆಗಳ ವಿಷಯದಲ್ಲಿ ಆತ್ಮನಿರ್ಭರ ಭಾರತಕ್ಕೆ ದಾರಿ ಮಾಡಿಕೊಡುತ್ತದೆ” ಎಂದಿದ್ದಾರೆ.
Congratulations to @DRDO_India on successful maiden flight of the Autonomous Flying Wing Technology Demonstrator from Chitradurga ATR.
It is a major achievement towards autonomous aircrafts which will pave the way for Aatmanirbhar Bharat in terms of critical military systems. pic.twitter.com/pQ4wAhA2ax
— Rajnath Singh (@rajnathsingh) July 1, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.