ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಜುಲೈ 4ರಂದು ರಾಜ್ಯ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಬೇಕಿದೆ. ನೂತನವಾಗಿ ರಚನೆಯಾಗಿರುವ ಶಿಂಧೆ ಸರಕಾರವು ವಿಶ್ವಾಸಮತ ಎದುರಿಸಲಿರುವ ಜುಲೈ 3 ಮತ್ತು 4ರಂದು ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನ ನಡೆಯಲಿದೆ.
ಸ್ಪೀಕರ್ ಚುನಾವಣೆಗೆ ಜುಲೈ 2 ರಂದು ನಾಮಪತ್ರ ಸಲ್ಲಿಸಲಾಗುತ್ತಿದೆ ಮತ್ತು ಜುಲೈ 3 ರಂದು ಚುನಾವಣೆ ನಡೆಯಲಿದೆ. ಕಳೆದ ವರ್ಷ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ರಾಜೀನಾಮೆ ನೀಡಿದ ನಂತರ ಸ್ಪೀಕರ್ ಸ್ಥಾನ ಖಾಲಿಯಾಗಿದೆ.
ಮೂಲಗಳ ಪ್ರಕಾರ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸೇರಿದಂತೆ ಮಹಾರಾಷ್ಟ್ರ ಬಿಜೆಪಿಯ ಉನ್ನತ ಶಾಸಕರು ಇಂದು ವಿಧಾನಸಭೆ ಸ್ಪೀಕರ್ ಆಯ್ಕೆಯ ಕುರಿತು ಚರ್ಚಿಸಲಿದ್ದಾರೆ. ಸಭೆಯಲ್ಲಿ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಅಚ್ಚರಿಯ ನಡೆಯಲ್ಲಿ ಗುರುವಾರ ಏಕನಾಥ್ ಶಿಂಧೆ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಘೋಷಿಸಲಾಗಿದ್ದು, ದೇವೇಂದ್ರ ಫಡ್ನವಿಸ್ ಅವರ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಶಿವಸೇನೆ ಮತ್ತು ಪಕ್ಷೇತರರು ಸೇರಿದಂತೆ 50 ಶಾಸಕರ ಬೆಂಬಲ ತನಗೆ ಇದೆ ಎಂದು ಶಿಂಧೆ ಹೇಳಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.