ನವದೆಹಲಿ: ರಾಜಸ್ಥಾನದ ಉಧಯ್ಪುರ್ನಲ್ಲಿ ನಡೆದ ಹಿಂದೂ ಟೈಲರ್ ಕನ್ಹಯ್ಯ ಲಾಲ್ ಅವರ ಪ್ರಕರಣದಲ್ಲಿ ಪೊಲೀಸರು ಮತ್ತೆ ಕೆಲವರನ್ನು ಬಂಧಿಸಿದ್ದಾರೆ.
“ನಾವು ಪ್ರಕರಣ ಇಬ್ಬರು ಮಾಸ್ಟರ್ಮೈಂಡ್ಗಳನ್ನು ಬಂಧಿಸಿದ್ದೇವೆ ಮತ್ತು ಬಂಧಿತರು ಈ ಹಿಂದೆ ಘೋರ ಅಪರಾಧ ಮಾಡಿದವರು” ಎಂದು ಉದಯಪುರ್ನ ಹಿರಿಯ ಪೊಲೀಸ್ ಅಧಿಕಾರಿ ಪ್ರಫುಲ್ಲ ಕುಮಾರ್ ಹೇಳಿದ್ದಾರೆ.
ಕನ್ಹಯ್ಯ ಲಾಲ್ ಅವರ ಹತ್ಯೆಯ ಬಳಿಕ ಉಧಯ್ಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ಪರಿಸ್ಥಿತಿ ತಿಳಿಗೊಂಡಿದ್ದು, ಇಂಟರ್ನೆಟ್ ಸೇವೆಗಳನ್ನು ಮರುಸ್ಥಾಪಿಸಲಾಗುತ್ತಿದೆ ಎಂದಿದ್ದಾರೆ.
ಹತ್ಯೆಯ ನಂತರ ಭದ್ರತಾ ಪಡೆಗಳು ಅಲರ್ಟ್ ಆಗಿವೆ, ಇದೀಗ ಬಂಧನಕ್ಕೊಳಗಾದ ಇಬ್ಬರು ಮುಸ್ಲಿಂ ವ್ಯಕ್ತಿಗಳು ಕೃತ್ಯವನ್ನು ಚಿತ್ರೀಕರಿಸಿ ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ್ದಾರೆ ಎಂದಿದ್ದಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಹತ್ಯೆಯ ಕುರಿತು ತನಿಖೆ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.