ನವದೆಹಲಿ: 16ನೇ ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಅಧಿಸೂಚನೆ ಹೊರಡಿಸಲಾಗುತ್ತಿದೆ.
ಜುಲೈ 19ರವರೆಗೆ ನಾಮಪತ್ರ ಸಲ್ಲಿಸಬಹುದು. ಮುಂದಿನ ತಿಂಗಳು 6ರಂದು ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಸಂಸತ್ತಿನ ಉಭಯ ಸದನಗಳ ಸದಸ್ಯರನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನ ಸದಸ್ಯರು ಉಪ ರಾಷ್ಟ್ರಪತಿಗಳನ್ನು ಆಯ್ಕೆ ಮಾಡುತ್ತಾರೆ.
16ನೇ ಉಪ ರಾಷ್ಟ್ರಪತಿ ಚುನಾವಣೆಗೆ, ಚುನಾವಣಾ ಕಾಲೇಜು 233 ಚುನಾಯಿತ ಸದಸ್ಯರು ಮತ್ತು 12 ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರು ಮತ್ತು 543 ಲೋಕಸಭೆಯ ಚುನಾಯಿತ ಸದಸ್ಯರನ್ನು ಒಳಗೊಂಡಿದೆ. ಚುನಾವಣಾ ಕಾಲೇಜು ಸಂಸತ್ತಿನ ಉಭಯ ಸದನಗಳ ಒಟ್ಟು 788 ಸದಸ್ಯರನ್ನು ಒಳಗೊಂಡಿದೆ. ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಮುಂದಿನ ತಿಂಗಳು 10ಕ್ಕೆ ಕೊನೆಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.