ನವದೆಹಲಿ: ಚೀನಾದ ಸ್ಮಾರ್ಟ್ಫೋನ್ ತಯಾರಿಕಾ ಕಂಪನಿ ವಿವೊ ಮತ್ತು ಸಂಬಂಧಿತ ಸಂಸ್ಥೆಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ದೇಶಾದ್ಯಂತ 44 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿ, ಉತ್ತರ ಪ್ರದೇಶ, ಮೇಘಾಲಯ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳ ಸ್ಥಳಗಳಲ್ಲಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಸೆಕ್ಷನ್ಗಳ ಅಡಿಯಲ್ಲಿ ಶೋಧ ನಡೆಸಲಾಗುತ್ತಿದೆ.
ಸಂಸ್ಥೆಯು ವಿವೋ ಮತ್ತು ಸಂಬಂಧಿತ ಕಂಪನಿಗಳಿಗೆ ಸಂಬಂಧಿಸಿದ 44 ಸ್ಥಳಗಳಲ್ಲಿ ಹುಡುಕಾಟ ನಡೆಸುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹಲವು ದೂರಗಳನ್ನು ಗಮನದಲ್ಲಿಟ್ಟುಕೊಂಡ ಇಡಿ ವಿವೋ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಿದೆ. ವಿವೋ ಕಂಪನಿಯಲ್ಲಿನ ಕೆಲವು ಚೀನೀ ಷೇರುದಾರರು ತಮ್ಮ ಗುರುತಿನ ದಾಖಲೆಗಳನ್ನು ನಕಲಿ ಮಾಡಿದ್ದಾರೆ ಎಂದೂ ಆರೋಪಿಸಲಾಗಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಚೀನಾದ ಹಲವಾರು ಸ್ಮಾರ್ಟ್ಫೋನ್ ತಯಾರಕರು, ಅವರ ವಿತರಕರು ಮತ್ತು ಸಂಬಂಧಿತ ಸಹವರ್ತಿಗಳ ವಿರುದ್ಧ ಆದಾಯ ತೆರಿಗೆ ಇಲಾಖೆಯು ದೇಶಾದ್ಯಂತ ದಾಳಿ ನಡೆಸಿತು ಮತ್ತು 6,500 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಲೆಕ್ಕವಿಲ್ಲದ ಆದಾಯವನ್ನು ಪತ್ತೆ ಮಾಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.