ನವದೆಹಲಿ: ಭಾರತೀಯ ವಾಯುಪಡೆಯ ಹೊಸ ಅಗ್ನಿಪಥ್ ಯೋಜನೆಯಡಿ ನೋಂದಣಿ ಪ್ರಕ್ರಿಯೆಯು ಮಂಗಳವಾರ ಪೂರ್ಣಗೊಂಡಿದ್ದು, ನೇಮಕಾತಿಗಾಗಿ ದಾಖಲೆ ಸಂಖ್ಯೆಯ ಅರ್ಜಿಗಳನ್ನು ಸ್ವೀಕರಿಸಿದೆ.
ಕೇಂದ್ರವು ಅಗ್ನಿಪಥ್ ಯೋಜನೆಯನ್ನು ಪ್ರಾರಂಭಿಸಿದ 10 ದಿನಗಳ ನಂತರ ಜೂನ್ 24 ರಂದು ಐಎಎಫ್ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು.
ಐಎಎಫ್ ಪ್ರಕಾರ, ಇದುವರೆಗೆ ಯಾವುದೇ ನೇಮಕಾತಿಯಲ್ಲಿ ಸ್ವೀಕರಿಸಿದ ಅತ್ಯಧಿಕ ಸಂಖ್ಯೆಯ ಅರ್ಜಿಗಳು 6,31,528 ಆಗಿದ್ದು, ಈ ವರ್ಷ ಅಗ್ನಿಪಥ್ ಯೋಜನೆಯಡಿಯಲ್ಲಿ 7,49,899 ಅರ್ಜಿಗಳನ್ನು ಸ್ವೀಕರಿಸಲಾಗಿದೆ.
“ಐಎಎಫ್ ಅಗ್ನಿಪಥ್ ನೇಮಕಾತಿ ಯೋಜನೆಗಾಗಿ ನಡೆಸಿದ ಆನ್ಲೈನ್ ನೋಂದಣಿ ಪ್ರಕ್ರಿಯೆಯು ಪೂರ್ಣಗೊಂಡಿದೆ. ಈ ಹಿಂದೆ ಯಾವುದೇ ನೇಮಕಾತಿಗಿಂತ ಅತ್ಯಧಿಕ ಸಂಖ್ಯೆಯ ಅರ್ಜಿಗಳನ್ನು ಸ್ವೀಕರಿಸಲಾಗಿದೆ. 7,49,899 ಅರ್ಜಿಗಳನ್ನು ಸ್ವೀಕರಿಸಲಾಗಿದೆ” ಎಂದು ಐಎಎಫ್ ಮಂಗಳವಾರ ಟ್ವೀಟ್ ಮಾಡಿದೆ.
ಹೊಸದಾಗಿ ಪ್ರಾರಂಭಿಸಲಾದ ಯೋಜನೆಯ ವಿರುದ್ಧ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳ ಹೊರತಾಗಿಯೂ ದಾಖಲೆ ಸಂಖ್ಯೆಯ ಅರ್ಜಿಗಳು ಬಂದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.