ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಹೆಸರನ್ನು ಕೇಂದ್ರ ಸರ್ಕಾರ ಇಂದು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.
ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. “ಶ್ರೀ ವಿರೇಂದ್ರ ಹೆಗ್ಗಡೆಯವರು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವ ಅವಕಾಶವನ್ನು ನಾನು ಪಡೆದುಕೊಂಡಿದ್ದೇನೆ ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ಕಂಡಿದ್ದೇನೆ. ಅವರು ಖಂಡಿತವಾಗಿಯೂ ಸಂಸತ್ತಿನ ಕಲಾಪಗಳನ್ನು ಸಮೃದ್ಧಪಡಿಸುತ್ತಾರೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಸಮುದಾಯಕ್ಕೆ ಮಹೋನ್ನತ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಶ್ರೀ ವೀರೇಂದ್ರ ಹೆಗ್ಗಡೆಯವರು ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ಅವಕಾಶ ಹಾಗು ಅವರು ಆರೋಗ್ಯ,ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೈಗೊಂಡಿರುವ ಮಹತ್ತರ ಕಾರ್ಯಗಳಿಗೆ ಸಾಕ್ಷಿಯಾಗುವ ಅವಕಾಶ ನನಗೆ ಒದಗಿತ್ತು. pic.twitter.com/KwoNdZyW6Z
— Narendra Modi (@narendramodi) July 6, 2022
ಕೇರಳದ ಮಾಜಿ ಅಥ್ಲೀಟ್ ಪಿಟಿ ಉಷಾ, ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್, ತಮಿಳುನಾಡಿನ ಇಳಯರಾಜ ಅವರನ್ನು ಕೂಡ ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.