ಬೆಂಗಳೂರು: ಕರ್ನಾಟಕದ ಏಳು ಜಿಲ್ಲೆಗಳಲ್ಲಿ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲಲ್ಲಿ ನೆರೆ, ಗುಡ್ಡ ಕುಸಿತದಂತಹ ಅನಾಹುತಗಳೂ ಸಂಭವಿಸಿದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣಕನ್ನಡ, ಉತ್ತರಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣಕನ್ನಡ, ಉತ್ತರಕನ್ನಡ ಮತ್ತು ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರೀ ಮಳೆಗೆ ಭೂಕುಸಿತವುಂಟಾಗಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡದ ಬಂಟ್ವಾಳದಿಂದ ವರದಿಯಾಗಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೂ 4 ದಿನಗಳ ಕಾಲ ಗಾಳಿಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, 20.45 ಸೆಂ.ಮೀ.ಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಮುಖ್ಯವಾಗಿ ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.