ಲಂಡನ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆಯನ್ನು ನೀಡಲು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ಎಂದು ತಿಳಿಸಿವೆ.
ಕಳೆದ ಕೆಲವು ದಿನಗಳಿಂದ ಬ್ರಿಟನ್ನಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಹಲವು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೂ ಬೋರಿಸ್ ಜಾನ್ಸನ್ ಅವರು ರಾಜೀನಾಮೆ ನೀಡಲು ಒಪ್ಪಿಕೊಂಡಿರಲಿಲ್ಲ.
ಕೊನೆಗೂ ತಮ್ಮ ಹಠ ಬಿಟ್ಟಿರುವ ಜಾನ್ಸನ್ ಅವರು ಇಂದು ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ ಮುಂದಿನ ಪ್ರಧಾನಿಯ ಆಯ್ಕೆ ಆಗುವವರೆಗೆ ಹುದ್ದೆಯಲ್ಲಿ ಮುಂದುವರೆಯುತ್ತೇನೆ ಎಂದು ತಿಳಿಸಿದ್ದಾರೆ.
ಇಂದು ಸಂಜೆ ಜಾನ್ಸನ್ ಅವರು ಔಪಚಾರಿಕವಾಗಿ ಪ್ರಧಾನಿ ಹುದ್ದೆಗೆ ರಾಜೀನಾಮೆಯನ್ನು ಸಲ್ಲಿಸಲಿದ್ದಾರೆ. ಇದಾದ ಬಳಿಕ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾರತೀಯ ಮೂಲದ ರಿಷಿ ಸುನಾಕ್ ಸೇರಿದಂತೆ ಎಂಟು ಹಿರಿಯ ಮತ್ತು ಐವರು ಕಿರಿಯ ಸಚಿವರು ಜಾನ್ಸನ್ ಅವರ ಸರಕಾರದಿಂದ ಹೊರ ನಡೆದಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡಲೇಬೇಕಾದ ಸನ್ನಿವೇಶ ಎದುರಾಗಿದೆ. ಅಕ್ಟೋಬರ್ ತಿಂಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.