ಟೊಕಿಯೋ: ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಪ್ರಚಾರ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದ, ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ ಎಂದು ಮೂಲಗಳು ಸೊಷ್ಟಪಡಿಸಿವೆ.
ಅನಾರೋಗ್ಯದ ಕಾರಣಕ್ಕಾಗಿ 2020 ರಲ್ಲಿ ಪ್ರಧಾನಿ ಹುದ್ದೆಯಿಂದ ಅಬೆ ಕೆಳಗಿಳಿದಿದ್ದರು. ಅದಕ್ಕೂ ಮೊದಲು ಅಬೆ ಜಪಾನ್ನ ದೀರ್ಘಾವಧಿಯ ಪ್ರಧಾನ ಮಂತ್ರಿಯಾಗಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದಾರೆ. ಆದರೆ ಅವರು ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ (ಎಲ್ಡಿಪಿ) ಮೇಲೆ ಪ್ರಬಲ ಪ್ರಭಾವವನ್ನು ಉಳಿಸಿಕೊಂಡಿದ್ದರು.
ಜಪಾನ್ ಮತ್ತು ಭಾರತ ನಡುವಣ ಬಾಂಧವ್ಯವನ್ನು ಉನ್ನತ ಮಟ್ಟಕ್ಕೆ ಏರಿಸಿದ್ದ ಇವರಗೆ 2021ರಲ್ಲಿ ಭಾರತ ಸರ್ಕಾರ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮ ವಿಭೂಷಣವನ್ನು ಘೋಷಣೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.