ನವದೆಹಲಿ: ಜಪಾನ್ ಪ್ರಧಾನಿ ಶಿಂಜೋ ಅಬೆ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಾಳೆ ದೇಶದಲ್ಲಿ ಒಂದು ದಿನದ ಶೋಕಾಚರಣೆಯನ್ನು ವ್ಯಕ್ತಪಡಿಸಲಾಗಿದೆ.
ಟ್ವಿಟ್ ಮಾಡಿರುವ ಮೋದಿ, “ನನ್ನ ಆತ್ಮೀಯ ಸ್ನೇಹಿತರಲ್ಲೊಬ್ಬರಾದ ಶಿಂಜೊ ಅಬೆ ಅವರ ದುರಂತ ನಿಧನದಿಂದ ನಾನು ಪದಗಳಲ್ಲಿ ಹೇಳಲಾಗದಷ್ಟು ಆಘಾತ ಮತ್ತು ದುಃಖಿತನಾಗಿದ್ದೇನೆ. ಅವರು ಅತ್ಯುನ್ನತ ಜಾಗತಿಕ ರಾಜಕಾರಣಿ, ಅತ್ಯುತ್ತಮ ನಾಯಕ ಮತ್ತು ಅಮೋಘ ಆಡಳಿತಗಾರರಾಗಿದ್ದರು. ಜಪಾನ್ ಮತ್ತು ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು” ಎಂದಿದ್ದಾರೆ.
“ಅಬೆ ಅವರೊಂದಿಗಿನ ನನ್ನ ಒಡನಾಟವು ಹಲವು ವರ್ಷಗಳ ಹಿಂದಿನದು. ನಾನು ಗುಜರಾತ್ ಸಿಎಂ ಆಗಿದ್ದಾಗ ಅವರ ಪರಿಚಯವಾಯಿತು ಮತ್ತು ನಾನು ಪ್ರಧಾನಿಯಾದ ನಂತರ ನಮ್ಮ ಸ್ನೇಹ ಮುಂದುವರೆಯಿತು. ಆರ್ಥಿಕತೆ ಮತ್ತು ಜಾಗತಿಕ ವ್ಯವಹಾರಗಳ ಬಗ್ಗೆ ಅವರ ತೀಕ್ಷ್ಣವಾದ ಒಳನೋಟಗಳು ಸದಾ ನನ್ನ ಮೇಲೆ ಆಳವಾದ ಪ್ರಭಾವ ಬೀರಿದವು” ಎಂದಿದ್ದಾರೆ.
“ಶಿಂಜೊ ಅವರಿಗೆ ನಮ್ಮ ಆಳವಾದ ಗೌರವದ ಸಂಕೇತವಾಗಿ ಜುಲೈ 9 ರಂದು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುತ್ತದೆ” ಎಂದಿದ್ದಾರೆ.
As a mark of our deepest respect for former Prime Minister Abe Shinzo, a one day national mourning shall be observed on 9 July 2022.
— Narendra Modi (@narendramodi) July 8, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.