ಕೊಲಂಬೊ: ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಇದೀಗ ಜನರು ದಂಗೆ ಏಳುತ್ತಿದ್ದಾರೆ. ತಮ್ಮನ್ನು ಸಂಕಷ್ಟಕ್ಕೆ ದೂಡಿದ ಸರ್ಕಾರದ ವಿರುದ್ಧ ತಮ್ಮ ಆಕ್ರೋಶಗಳನ್ನು ವಿವಿಧ ರೀತಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ಅಧಿಕೃತ ನಿವಾಸಕ್ಕೆ ಪ್ರತಿಭಟನಾಕಾರರು ನುಗ್ಗಿದ್ದು, ದಾಂಧಲೆ ನಡೆಸುತ್ತಿದ್ದಾರೆ.
ಅಧ್ಯಕ್ಷರ ಮನೆಗೆ ನುಗ್ಗಿದ ಪ್ರತಿಭಟನಾ ನಿರತರನ್ನು ತಡೆಗಟ್ಟಲು ಬೆಂಗಾವಲು ಪಡೆ ಸಾಕಷ್ಟು ಹೋರಾಟವನ್ನು ನಡೆಸಿದೆ. ಆದರೂ ಕೆಲವರು ಕಾಂಪೌಂಡ್ ದಾಟಿ ಒಳಗೆ ಬಂದಿದ್ದು ಸ್ವಿಮ್ಮಿಂಗ್ ಪೂಲ್ ಸೇರಿದಂತೆ ಇತರ ಕೆಲವು ಪ್ರದೇಶಗಳನ್ನು ಆಕ್ರಮಿಸಿಕೊಂಡಿದ್ದಾರೆ.
ಬ್ಯಾರಿಕೆಡ್ ಗಳನ್ನು ದಾಟಿ ಒಳ ನುಗ್ಗಿರುವ ಪ್ರತಿಭಟನಾಕಾರರು ಅಧ್ಯಕ್ಷರ ಮನೆಯನ್ನು ಹಿಡಿತಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಆಹಾರ ಸಾಮಗ್ರಿಗಳಿಗೆ ಅಭಾವ ಎದುರಾಗಿದೆ. ಪೆಟ್ರೋಲ್ ಸೇರಿದಂತೆ ಯಾವುದೇ ರೀತಿಯ ಇಂಧನಗಳು ಅಲ್ಲಿ ಸಿಗುತ್ತಿಲ್ಲ. ಶಸ್ತ್ರಚಿಕಿತ್ಸೆಗೆ ವೈದ್ಯಕೀಯ ಸಲಕರಣೆಗಳು ಮತ್ತು ಔಷಧಿಗಳ ಕೊರತೆ ಉಂಟಾಗಿದೆ.
ಈ ಪರಿಸ್ಥಿತಿಯ ವಿರುದ್ಧ ರಾಜಧಾನಿ ಕೊಲಂಬೋದಲ್ಲಿ ಭಾರಿ ಜನಸ್ತೋಮ ನೆರೆದು ತೀವ್ರಗತಿಯ ಪ್ರತಿಭಟನೆ ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.