ನವದೆಹಲಿ: ಇನ್ನು ಐದು ವರ್ಷಗಳಲ್ಲಿ ಪೆಟ್ರೋಲ್ ನಿಂದ ದೇಶಕ್ಕೆ ಮುಕ್ತಿ ಸಿಗಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಹತ್ವದ ಹೇಳಿಕೆ ನೀಡಿದ್ದಾರೆ.
ದೇಶದಲ್ಲಿ ಹಸಿರು ಇಂಧನ ಬಳಕೆಗೆ ಉತ್ತೇಜನವನ್ನು ನೀಡಲಾಗುತ್ತಿದೆ. ಹೀಗಾಗಿ ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಬಳಕೆ ನಿಲ್ಲಲಿದೆ. ಪೆಟ್ರೋಲ್ ಸ್ಥಾನವನ್ನು ಹಸಿರು ಇಂಧನ ತುಂಬಲಿದೆ ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರದ ಅಂಕೋಲಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
“ಐದು ವರ್ಷಗಳ ಬಳಿಕ ರಾಷ್ಟ್ರದಲ್ಲಿ ಪೆಟ್ರೋಲ್ ಬಳಕೆ ನಿಂತು ಹೋಗಲಿದೆ ಎಂದು ನಾನು ಆತ್ಮವಿಶ್ವಾಸದಿಂದ ಹೇಳುತ್ತೇನೆ. ನಮ್ಮ ವಾಹನಗಳು ಹಸಿರು ಹೈಡ್ರೋಜನ್, ಎಥೆನಾಲ್ ಫ್ಲೆಕ್ಸ್ ಇಂಧನ, ಸಿಎನ್ಜಿ ಅಥವಾ ಎನ್ಎನ್ಜಿ ಮೂಲಕ ಚಲಿಸಲಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.