ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ 3 ಕರಾವಳಿ ಜಿಲ್ಲೆಗಳಲ್ಲಿ ಜುಲೈ 11ರ ತನಕ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 11 ರ ತನಕ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡದಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಉತ್ತರ ಕನ್ನಡದ ಕರಾವಳಿಯಲ್ಲಿ ಜನಜೀವನ ಮಳೆಯ ಕಾರಣದಿಂದ ಅಸ್ತವ್ಯಸ್ತವಾಗಿದೆ. ಉಡುಪಿಯಲ್ಲೂ ಬಹುತೇಕ ಇದೇ ಪರಿಸ್ಥಿತಿ ಇದೆ.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.