ನವದೆಹಲಿ: ದಿವಾಳಿಯಾಗಿರುವ ದ್ವೀಪ ರಾಷ್ಟ್ರ ಶ್ರೀಲಂಕಾವು ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹೀಗಾಗಿ ಇಡೀ ಶ್ರೀಲಂಕಾ ಸಂಪುಟ ರಾಜೀನಾಮೆ ನೀಡಿ, ಹೊಸ ಸರ್ವಪಕ್ಷಗಳ ಮಧ್ಯಂತರ ಸರ್ಕಾರಕ್ಕೆ ತಮ್ಮ ಜವಾಬ್ದಾರಿಗಳನ್ನು ಹಸ್ತಾಂತರಿಸಲಿದೆ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಕಚೇರಿ ಇಂದು ತಿಳಿಸಿದೆ.
ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ಈ ಬುಧವಾರ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ವಿಕ್ರಮಸಿಂಘೆ ಕೂಡ ಹೊಸ ಸರ್ಕಾರ ರಚನೆಯಾದ ನಂತರ ಅಧಿಕಾರದಿಂದ ಕೆಳಗಿಳಿಯುವುದಾಗಿ ಹೇಳಿದ್ದಾರೆ.
ಅಧ್ಯಕ್ಷ ರಾಜಪಕ್ಸೆ ಮತ್ತು ಪ್ರಧಾನಿ ವಿಕ್ರಮಸಿಂಘೆ ರಾಜೀನಾಮೆಗೆ ಒಪ್ಪಿಗೆ ನೀಡಿದ ಬಳಿಕ ವಿರೋಧ ಪಕ್ಷಗಳು ಭಾನುವಾರ ಮಾತುಕತೆ ನಡೆಸಿ ಸರ್ವಪಕ್ಷಗಳ ಮಧ್ಯಂತರ ಸರ್ಕಾರ ರಚಿಸಲು ನಿರ್ಧರಿಸಿವೆ.
ಹೊಸ ಸರ್ವಪಕ್ಷ ಸರ್ಕಾರ ರಚನೆಯಾದ ಕೂಡಲೇ ಸಂಪುಟದ ಎಲ್ಲ ಸದಸ್ಯರು ತಮ್ಮ ಜವಾಬ್ದಾರಿಯನ್ನು ಹಸ್ತಾಂತರಿಸಲು ಒಪ್ಪಿಗೆ ನೀಡಿದ್ದಾರೆ ಎಂದು ಪ್ರಧಾನಿ ವಿಕ್ರಮಸಿಂಘೆ ಅವರ ಕಚೇರಿ ತಿಳಿಸಿದೆ.
”ಸರ್ವಪಕ್ಷಗಳ ಸರಕಾರ ರಚನೆಗೆ ಒಪ್ಪಂದ ಆದ ಕೂಡಲೇ ಹೊಸ ಸರಕಾರಕ್ಕೆ ತಮ್ಮ ಜವಾಬ್ದಾರಿಯನ್ನು ಹಸ್ತಾಂತರಿಸಲು ಸಿದ್ಧರಿದ್ದೇವೆ ಎಂದು ಚರ್ಚೆಯಲ್ಲಿ ಭಾಗವಹಿಸಿದ್ದ ಎಲ್ಲ ಸಚಿವರು ಘೋಷಿಸಿದ್ದಾರೆ” ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.
ಸಂಪುಟದ ಸಚಿವರೊಂದಿಗೆ ಇಂದು ನಡೆದ ಚರ್ಚೆಯ ನಂತರ ಈ ಬೆಳವಣಿಗೆ ನಡೆದಿದೆ.
ಇಂದು ಬೆಳಗ್ಗೆ ಪ್ರಧಾನಿ ವಿಕ್ರಮಸಿಂಘೆ ಅವರು ಸಚಿವರೊಂದಿಗೆ ಚರ್ಚೆ ನಡೆಸಿದ್ದರು.
ಈಗಾಗಲೇ ಐವರು ಕ್ಯಾಬಿನೆಟ್ ಸಚಿವರು ರಾಜೀನಾಮೆ ಘೋಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.