ನವದೆಹಲಿ: ಭಾರತದ ಪುರಾತನ ಪರಂಪರೆಗೆ ಪ್ರಾಮುಖ್ಯತೆ ನೀಡುವ ಸಲುವಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಗುರುಕುಲ ಪದ್ಧತಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಚಿಂತಿಸುತ್ತಿದೆ.
ಸಿಬಿಎಸ್ಸಿ ಮಾದರಿಯಲ್ಲೇ ಗುರುಕುಲ ವ್ಯವಸ್ಥೆಯನ್ನು ಜಾರಿಗೊಳಿಸಲು ಶಿಕ್ಷಣ ಸಚಿವಾಲಯ ನಿರ್ಧರಿಸಿದೆ. ಸ್ವಾಮಿ ವಿವೇಕಾನಂದ, ಸರ್ದಾರ್ ಪಟೇಲ್, ನಾನಾಜಿ ದೇಶ್ಮುಖ್, ಸಾರ್ವಕರ್, ದೀನದಯಾಳ್ ಉಪಾಧ್ಯಾಯ, ಶ್ಯಾಮ ಪ್ರಸಾದ್ ಮುಖರ್ಜಿ, ಪಂಡಿತ್ ಮಾಳವಿಯಾ ಅವರ ಜೀವನಚರಿತ್ರೆ, ಸಾಧನೆಗಳನ್ನು ಇದರ ಪಠ್ಯದಲ್ಲಿ ಅಳವಡಿಸಲಾಗುತ್ತಿದೆ.
ಭಗವದ್ಗೀತೆ ಮತ್ತು ಯೋಗಗಳಿಗೂ ಇಲ್ಲಿ ಹೆಚ್ಚಿನ ಪ್ರಾಶಸ್ತ್ಯಗಳನ್ನು ನೀಡಲಾಗುತ್ತದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇದು ಶೀಘ್ರದಲ್ಲೇ ಜಾರಿಗೆ ಬರಲಿದೆ ಎನ್ನಲಾಗಿದೆ.
ಇಲ್ಲಿ ಇಂಗ್ಲೀಷ್ನ ಬದಲು ಹಿಂದಿ ಮತ್ತು ಇತರ ಪ್ರಾದೇಶಿಕ ಭಾಷೆಯನ್ನು ಶಿಕ್ಷಣದ ಮಾಧ್ಯಮವನ್ನಾಗಿಸಲು ನಿರ್ಧರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.