ಬೆಂಗಳೂರು: ವಿಕ್ರಮ ವಾರಪತ್ರಿಕೆಯು 75ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ವಿಶೇಷ ಲೋಗೋವನ್ನು ಇಂದು ಬೆಳಿಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಶ್ರೀ ಮೋಹನ್ ಭಾಗವತ್ ಅವರು ಬೆಂಗಳೂರಿನ ಕೇಶವಕೃಪಾದಲ್ಲಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಗೌರವ ಸಂಪಾದಕರಾದ ಶ್ರೀ ನ. ನಾಗರಾಜ, ಸಂಪಾದಕರಾದ ಶ್ರೀ ವೃಷಾಂಕ ಭಟ್, ವ್ಯವಸ್ಥಾಪಕ ಸಂಪಾದಕರಾದ ಶ್ರೀ ಸು. ನಾಗರಾಜ್, ವ್ಯವಸ್ಥಾಪಕರಾದ ಶ್ರೀ ಸತೀಶ್.ಬಿ ಉಪಸ್ಥಿತರಿದ್ದರು.
ವಿಕ್ರಮ ವಾರಪತ್ರಿಕೆಯು ಪ್ರಖರ ರಾಷ್ಟ್ರೀಯ ವಿಚಾರಗಳನ್ನು ನಿರಂತರವಾಗಿ ಪ್ರತಿಪಾದಿಸುತ್ತಾ ಬಂದಿದ್ದು 1948ರ ಗುರುಪೂರ್ಣಿಮಾ ದಿನದಂದು ಉದ್ಘಾಟನೆಗೊಂಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.