ನವದೆಹಲಿ: ವಯಸ್ಸು ಕೇವಲ ಸಂಖ್ಯೆಯಷ್ಟೇ, ಮನಸ್ಸಲ್ಲಿ ಉತ್ಸಾಹವಿದ್ದರೆ ಇಳಿ ವಯಸ್ಸಲ್ಲೂ ಎಂತಹ ಸಾಧನೆಯನ್ನಾದರೂ ಮಾಡಬಹುದು ಎಂದು ತೋರಿಸಿಕೊಟ್ಟಿದ್ದಾರೆ 94 ವರ್ಷದ ಅಥ್ಲೀಟ್ ಭವಾನಿ ದೇವಿ.
ಭಾರತದ 94 ವರ್ಷದ ಓಟಗಾರ್ತಿ ಭಗವಾನಿ ದೇವಿ ಅವರು ಫಿನ್ಲ್ಯಾಂಡ್ನ ಟಂಪೆರೆಯಲ್ಲಿ ನಡೆದ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ 100 ಮೀ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. 24.74 ಸೆಕೆಂಡ್ಗಳಲ್ಲಿ ಗುರಿ ತಲುಪಿ ಚಿನ್ನ ಗೆದ್ದು ಸಾಧನೆ ಮಾಡದ್ದಾರೆ. ಮಾತ್ರವಲ್ಲದೇ ಅವರು ಶಾಟ್ಪುಟ್ನಲ್ಲಿ ಕಂಚಿನ ಪದಕವನ್ನೂ ಪಡೆದುಕೊಂಡಿದ್ದಾರೆ.
ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ಗಳನ್ನು ಜೂನ್ 29 ರಿಂದ ಜುಲೈ 10 ರವರೆಗೆ ಟಂಪೆರೆಯಲ್ಲಿ ನಡೆಸಲಾಯಿತು. ಇದು 35 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳಿಗೆ ಅಥ್ಲೆಟಿಕ್ಸ್ ಕ್ರೀಡೆಗಾಗಿ ವಿಶ್ವ ಚಾಂಪಿಯನ್ಶಿಪ್-ಕ್ಯಾಲಿಬರ್ ಈವೆಂಟ್ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.