ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್ಎಸ್ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ. ಮುಂಜಾನೆ ಘಟನೆ ಸಂಭವಿಸಿದ್ದು, ದಾಳಿಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಒಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆ ಸಮೀಪದಲ್ಲಿಯೇ ಈ ದಾಳಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ದಾಳಿಯ ಹಿಂದೆ ಸಿಪಿಎಂ ಕೈವಾಡವಿದೆ ಎಂದು ಆರ್ಎಸ್ಎಸ್ ಆರೋಪಿಸಿದೆ. ಆದರೆ ಇದುವರೆಗೆ ಆರೋಪಿಗಳ ಸುಳಿವು ಸಿಕ್ಕಿಲ್ಲ.
ದಾಳಿ ನಡೆಸಿದವರು ಯಾರು, ಯಾವ ಉದ್ದೇಶಕ್ಕಾಗಿ ಕೃತ್ಯ ಎಸಗಲಾಗಿದೆ? ಎಂಬಿತ್ಯಾದಿ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
Kerala | Visuals from RSS office in Payyannur, Kannur which was allegedly bombed early this morning, leaving the window glass broken pic.twitter.com/ALjpuXNH2K
— ANI (@ANI) July 12, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.