ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಕೇಂದ್ರ ಸರ್ಕಾರ ಇದೇ ಭಾನುವಾರ ಬೆಳಗ್ಗೆ ಸರ್ವಪಕ್ಷ ಸಭೆಗೆ ಕರೆ ನೀಡಿದೆ. ಈ ಸಭೆಯನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕರೆದಿದ್ದಾರೆ. ಈ ಸಭೆಗೆ ಎಲ್ಲ ರಾಜಕೀಯ ಪಕ್ಷಗಳ ಮುಖಂಡರನ್ನು ಆಹ್ವಾನಿಸಲಾಗಿದೆ.
ಭಾರತ-ಚೀನಾ ಗಡಿ ಬಿಕ್ಕಟ್ಟು ಮತ್ತು ಸಶಸ್ತ್ರ ಪಡೆಗಳಿಗೆ ಅಲ್ಪಾವಧಿಯ ನೇಮಕಾತಿಗಾಗಿ ಅಗ್ನಿಪಥ್ ಯೋಜನೆಯು ಮುಂಬರುವ ಅಧಿವೇಶನದಲ್ಲಿ ಪ್ರತಿಪಕ್ಷಗಳು ಪ್ರಸ್ತಾಪಿಸುವ ಕೆಲವು ಪ್ರಮುಖ ವಿಷಯಗಳಾಗುವ ನಿರೀಕ್ಷೆ ಇದೆ.
ಇದಕ್ಕೂ ಮುನ್ನ ಜುಲೈ 10 ರಂದು ಎನ್ಡಿಎ ನಾಯಕರು ಸಭೆ ಸೇರಿ ಮುಂಗಾರು ಅಧಿವೇಶನಕ್ಕೆ ಮುನ್ನ ಕಾರ್ಯತಂತ್ರದ ಕುರಿತು ವಿವರವಾದ ಚರ್ಚೆ ನಡೆಸಿದ್ದಾರೆ.
ಜುಲೈ 18 ರಂದು ಅಧಿವೇಶನದ ಆರಂಭಿಕ ದಿನದಂದು ರಾಷ್ಟ್ರಪತಿ ಆಯ್ಕೆ ಮತ್ತು ಆಗಸ್ಟ್ 6 ರಂದು ಉಪ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ.
ಅಧಿವೇಶನವು ಆಗಸ್ಟ್ 12 ರವರೆಗೆ ಮುಂದುವರಿಯುತ್ತದೆ. ಈ ಅಧಿವೇಶನದಲ್ಲಿ ರಾಷ್ಟ್ರಪತಿ ಚುನಾವಣೆ ಮತ್ತು ಉಪರಾಷ್ಟ್ರಪತಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಮುಂಗಾರು ಅಧಿವೇಶನ ಮಹತ್ವದ್ದಾಗಿದೆ. ಮುಂದಿನ ತಿಂಗಳು 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.