ಉಡುಪಿ: ಪ್ರಧಾನಿ ನರೇಂದ್ರ ಮೋದಿ ಕ್ರಿಯಾಶೀಲವಾಗಿದ್ದಾರೆ. ಅದಕ್ಕೆ ತಕ್ಕ ಹಾಗೆ ನಮ್ಮ ದೇಶದ ಲಾಂಛನವಾಗಿರುವ ಸಿಂಹ ಸಶಕ್ತ ಹಾಗೂ ಘರ್ಜನಾ ರೂಪದಲ್ಲಿ ಇರಬೇಕು. ಆ ರೀತಿಯಲ್ಲಿ ಸಿಂಹ ಲಾಂಛನ ಇದೆ. ಆದರೆ ವಿರೋಧ ಪಕ್ಷದವರು ನಿದ್ದೆ ಮಾಡಿಕೊಂಡೇ ಇರುವ ಸಿಂಹವನ್ನು ನಂಬಿಕೊಂಡಿರುವ ಸಂಸ್ಕೃತಿಯವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದವರು ಸಿಂಹ ಲಾಂಛನ ವಿಚಾರವಾಗಿ ಮಾಡುತ್ತಿರುವ ಟೀಕೆಗಳಿಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಸಿಂಹದ ಲಾಂಛ ಉಗ್ರವಾಗಿದೆ, ವ್ಯಗ್ರವಾಗಿದೆ ಎಂಬುದು ನೋಡುವವರ ದೃಷ್ಟಿಕೋನವಾಗಿದೆ. ಕಾಂಗ್ರೆಸ್ ನವರು ಈ ವಿಷಯವನ್ನು ರಾಜಕೀಯ ದೃಷ್ಟಿಯಿಂದ ನೋಡುತ್ತಿದ್ದಾರೆ. ಭಾರತಕ್ಕೆ ಈಗ ಕ್ರಿಯಾಶೀಲವಾಗಿರುವ, ಚುರುಕಾಗಿರುವ ಪ್ರಧಾನಮಂತ್ರಿಗಳಿದ್ದಾರೆ. ಅದಕ್ಕೆ ತಕ್ಕ ಹಾಗೆ ನಮ್ಮ ದೃಷ್ಟಿಯಲ್ಲಿ ಸಿಂಹ ಸಶಕ್ತರೂಪವಾಗಿದೆ. ಆದರೆ ಕಾಂಗ್ರೆಸ್ನವರು ನಿದ್ದೆ ಮಾಡಿಕೊಂಡೇ ಬಂದಂತಹ ಸಿಂಹವನ್ನು ನಂಬಿಕೊಂಡು ಬಂದವರು. ಆದ್ದರಿಂದ ಅವರಿಗೆ ಹಾಗೆ ಅನಿಸುತ್ತದೆ ಎಂದರು.
ಹೊಸ ಸಂಸತ್ ಭವನದ ಮೇಲೆ ರಾಷ್ಟ್ರೀಯ ಲಾಂಛನಕ್ಕೆ ಸಂಬಂಧಿಸಿದಂತೆ ವಿರೋಧಪಕ್ಷದವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡುತ್ತಿರುತ್ತಾರೆ ಎಂದಿದ್ದಾರೆ.
ಹೊಸ ಸಂಸತ್ ಭವನದ ಮೇಲೆ ಅನಾವರಣಗೊಳಿಸಿದ ರಾಷ್ಟ್ರೀಯ ಲಾಂಛನದ ಮುಖಚರ್ಯೆ ಬದಲಾಯಿಸಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಾಮ್ರಾಟ ಅಶೋಕರ ಕಾಲದಲ್ಲಿದ್ದ ಸಿಂಹದ ಲಾಂಛನ ಮತ್ತು ಅಶೋಕ ಚಕ್ರದ ಲಾಂಛನವನ್ನೇ ಅಳವಡಿಸಿಕೊಳ್ಳಲಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.