ವಿಶ್ವಸಂಸ್ಥೆ: ಶ್ರೀಲಂಕಾದಲ್ಲಿ ಪ್ರಸ್ತುತ ನಡೆಯುತ್ತಿರುವ ಪರಿಸ್ಥಿತಿಗಳ ಬಗ್ಗೆ ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ.
ಈ ಬಗ್ಗೆ ಮಾತನಾಡಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟನಿಯೋ ಗುಟೆರಸ್ ಅವರು, “ಶ್ರೀಲಂಕಾದಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಮೂಲ ಕಾರಣಗಳನ್ನು ಹುಡುಕುವುದು ಮತ್ತು ಪ್ರತಿಭಟನಾಕಾರರ ಸಮಸ್ಯೆಗಳನ್ನು ಪರಿಹರಿಸುವುದು ಅತ್ಯಂತ ಮುಖ್ಯ” ಎಂದಿದ್ದಾರೆ.
ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ಬದಲಾವಣೆಗಾಗಿ ಶ್ರೀಲಂಕಾದ ಎಲ್ಲಾ ಪಕ್ಷದ ನಾಯಕರು ರಾಜಿ ಮನೋಭಾವವನ್ನು ಅಳವಡಿಸಿಕೊಳ್ಳಬೇಕು. ಶಾಂತಿಯುತ ಅಧಿಕಾರ ಹಸ್ತಾಂತರಕ್ಕೆ ಅವಕಾಶ ನೀಡಬೇಕು ಎಂದಿರುವ ಅವರು, ಅಲ್ಲಿನ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸುವುದಾಗಿ ಹೇಳಿದ್ದಾರೆ.
ತೀವ್ರ ಸ್ವರೂಪದ ಆರ್ಥಿಕ ಬಿಕ್ಕಟನ್ನು ಎದುರಿಸಿರುವ ಶ್ರೀಲಂಕಾದಲ್ಲಿ ಪ್ರಸ್ತುತ ಜನರು ದಂಗೆ ಎದ್ದಿದ್ದಾರೆ. ಅಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದೆ. ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಮಾಲ್ಡೀವ್ಸ್ಗೆ ಹಾರಿದ್ದು, ಅಲ್ಲಿಂದ ಸಿಂಗಾಪುರಕ್ಕೆ ಹಾರುವ ಸಾಧ್ಯತೆ ಇದೆ.
ಈ ನಡುವೆ ಪ್ರಸ್ತುತ ಹಂಗಾಮಿ ಅಧ್ಯಕ್ಷ ಮತ್ತು ಪ್ರಧಾನಿಯಾಗಿರುವ ರನಿಲ್ ವಿಕ್ರಮ ಸಿಂಘೆ ಅವರು ಕೂಡ ರಾಜೀನಾಮೆ ನೀಡಬೇಕು ಎಂದು ಜನರು ಒತ್ತಡ ಹೇರುತ್ತಿದ್ದಾರೆ.
ಒಟ್ಟಿನಲ್ಲಿ ಶ್ರೀಲಂಕಾದ ಪರಿಸ್ಥಿತಿ ಭಯಾನಕವಾಗಿದ್ದು, ಮುಂದೇನು ಎಂಬ ಆತಂಕ ಕಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.