ನವದೆಹಲಿ: ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಗುರುವಾರ ಮಾಲ್ಡೀವ್ಸ್ನಿಂದ ಸಿಂಗಾಪುರಕ್ಕೆ ತೆರಳಿದ್ದಾರೆ.
ಆರ್ಥಿಕ ಬಿಕ್ಕಟ್ಟಿನೊಂದಿಗೆ ಅವರ ದೇಶ ತೀವ್ರ ಸ್ವರೂಪದಲ್ಲಿ ಹೋರಾಡುತ್ತಿರುವ ಸಂದರ್ಭದಲ್ಲಿ ಬೃಹತ್ ಪ್ರತಿಭಟನೆಯಿಂದ ತಪ್ಪಿಸಿಕೊಳ್ಳಲು ಅವರು ಮೊನ್ನೆ ಮಾಲ್ಡೀವ್ಸ್ಗೆ ಪರಾರಿಯಾಗಿದ್ದಾರೆ. ಇಂದು ಅವರು ಮಾಲ್ಡೀವ್ಸ್ನಿಂದ ಸಿಂಗಾಪುರಕ್ಕೆ ತೆರಳಿದ್ದಾರೆ.
ಶ್ರೀಲಂಕಾ ಅಧ್ಯಕ್ಷರು ಹಲವು ದಿನಗಳ ಮಟ್ಟಿಗೆ ಸಿಂಗಾಪುರದಲ್ಲಿ ಉಳಿಯುವ ನಿರೀಕ್ಷೆಯಿದೆ ಎಂದು ಲಂಕಾ ಸರ್ಕಾರದ ಮೂಲವೊಂದು ತಿಳಿಸಿದೆ.
ರಾಜಪಕ್ಸೆ ಬುಧವಾರ ರಾಜೀನಾಮೆ ನೀಡುವುದಾಗಿ ಭರವಸೆ ನೀಡಿದ್ದರು, ಆದರೆ ರಾಜೀನಾಮೆ ಪತ್ರವನ್ನು ಇನ್ನೂ ಸ್ವೀಕರಿಸಿಲ್ಲ ಎಂದು ಶ್ರೀಲಂಕಾದ ಸಂಸತ್ತಿನ ಸ್ಪೀಕರ್ ಯಾಪಾ ಅಬೇವರ್ಧನ ಅವರು ಹೇಳಿದ್ದಾರೆ.
ಇನ್ನೊಂದೆಡೆ ಅಧ್ಯಕ್ಷರ ಮತ್ತು ಪ್ರಧಾನಿಗಳ ಅಧಿಕೃತ ನಿವಾಸವನ್ನು ಆಕ್ರಮಿಸಿಕೊಂಡಿರುವ ಸರ್ಕಾರಿ ವಿರೋಧಿ ಪ್ರತಿಭಟನಾಕಾರರು, ತಾವು ಅತಿಕ್ರಮಿಸಿಕೊಂಡಿರುವ ಪ್ರಮುಖ ಕಟ್ಟಡಗಳನ್ನು ಖಾಲಿ ಮಾಡುವುದಾಗಿ ಘೋಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.