ಮುಂಬೈ: ಮಹಾರಾಷ್ಟ್ರದಲ್ಲಿ ಪೆಟ್ರೋಲ್ ದರವನ್ನು 5 ರೂಪಾಯಿ ಕಡಿಮೆ ಮತ್ತು ಡೀಸೆಲ್ ದರವನ್ನು 3 ರೂಪಾಯಿ ಕಡಿಮೆ ಮಾಡಲು ಸಿಎಂ ಏಕನಾಥ ಶಿಂಧೆ ನೇತೃತ್ವದ ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ.
ನಾಳೆಯಿಂದ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 106 ರೂಪಾಯಿ ಮತ್ತು ಡೀಸೆಲ್ ದರ 94 ರೂಪಾಯಿ ಆಗಮಿದೆ.
ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಕಡಿತದಿಂದ ರಾಜ್ಯಕ್ಕೆ ವರ್ಷಕ್ಕೆರೂ₹ 6,000 ಕೋಟಿ ವೆಚ್ಚವಾಗಲಿದೆ, ಆದರೆ ಇದು ಒಟ್ಟಾರೆ ಹಣದುಬ್ಬರವನ್ನು ತಗ್ಗಿಸುತ್ತದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
“ಇಂಧನ ಬೆಲೆಯನ್ನು ಕಡಿಮೆ ಮಾಡಲು ಮೇ ತಿಂಗಳಲ್ಲಿ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದಾಗ, ರಾಜ್ಯಗಳನ್ನೂ ತೆರಿಗೆಗಳನ್ನು ಕಡಿತಗೊಳಿಸುವಂತೆ ಕೇಳಲಾಯಿತು. ಆದರೆ ಹಿಂದಿನ ರಾಜ್ಯ ಸರ್ಕಾರ ಮಾಡಲಿಲ್ಲ. ನಾವು ಈಗ ಆ ಕ್ರಮವನ್ನು ತೆಗೆದುಕೊಂಡಿದ್ದೇವೆ” ಎಂದು ಶಿಂಧೆ ಹೇಳಿದ್ದಾರೆ.
ಬಿಜೆಪಿಯ ಸಹಭಾಗಿತ್ವದಲ್ಲಿ ಏಕನಾಥ್ ಶಿಂಧೆ ಅವರು ಹೊಸ ಸರ್ಕಾರವನ್ನು ರಚನೆ ಮಾಡಿದ್ದು, ಅಸೆಂಬ್ಲಿಯಲ್ಲಿ ಬಹುಮತವನ್ನು ಸಾಬೀತುಪಡಿಸಿದ ನಂತರ ಶಿಂಧೆ ಕಳೆದ ವಾರ ಇಂಧನದ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡುವುದಾಗಿ ಘೋಷಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.