ಗುವಾಹಟಿ: ನರೆಯಿಂದಾಗಿ ಅಸ್ಸಾಂನ ಶೇ.80ರಷ್ಟು ಭಾಗ ಸಂಪೂರ್ಣ ಜಲಾವೃತಗೊಂಡಿದ್ದು ಜನಜೀವನ ಸಂಕಷ್ಟಕ್ಕೀಡಾಗಿದೆ. ಮಹಾ ಮಳೆಯಿಂದಾಗಿ ಇದುವರೆಗೆ ಒಟ್ಟು 42 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಒಟ್ಟು 27 ಜಿಲ್ಲೆಗಳಿರುವ ಅಸ್ಸಾಂನಲ್ಲಿ 20 ಜಿಲ್ಲೆಗಳು ಜಲಾವೃತವಾಗಿದೆ, ಇದರಿಂದ 18 ಲಕ್ಷ ಜನರು ಅಪಾಯಕ್ಕೆ ಸಿಲುಕಿದ್ದಾರೆ. 1.1 ಲಕ್ಷದಷ್ಟು ಕೃಷಿ ಭೂಮಿ ನಾಶವಾಗಿದೆ. ಲಕ್ಷಾಂತರ ಜನರು ಸ್ಥಳಾಂತರಗೊಂಡಿದ್ದಾರೆ.
ಆಡಳಿತಗಳು ಒಟ್ಟು 308 ಪರಿಹಾ ಶಿಬಿರಗಳನ್ನು ಸ್ಥಾಪಿಸಿದ್ದು, 1.4 ಲಕ್ಷ ಜನರು ಇದರಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೋರತ್, ಗೋಲಾಪುರ, ಧುಬ್ರಿ ಜಿಲ್ಲೆಯಲ್ಲಿ ಬ್ರಹ್ಮಪುತ್ರ ನದಿಯೂ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ದಿಬ್ರುಗಂಜ್ನಲ್ಲಿ ಬುಹಿದೆಹಿಂಗ್ ನದಿ ಅಪಾಯಕಾರಿಯಾಗಿ ಪರಿಣಮಿಸಿದೆ. ಕಪಿಲಿ ಮತ್ತು ಕುಶಿವರ ನದಿಗಳೂ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಇದು ಜನತೆಯನ್ನು ಇನ್ನಷ್ಟು ಆತಂಕಕ್ಕೆ ದೂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.