ನವದೆಹಲಿ: I2U2 ಚೌಕಟ್ಟಿನ ಅಡಿಯಲ್ಲಿ ಭಾರತ, ಇಸ್ರೇಲ್, ಯುಎಇ, ಯುಎಸ್ಎ ನೀರು, ಇಂಧನ, ಪರಿಸರ, ಆರೋಗ್ಯ ಮತ್ತು ಬಾಹ್ಯಾಕಾಶ ಕ್ಷೇತ್ರಗಳಲ್ಲಿ ಹೂಡಿಕೆಯನ್ನು ಹೆಚ್ಚಿಸಲು ಕೆಲಸ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ.
I2U2 ಮೊದಲ ಶೃಂಗಸಭೆಯಿಂದಲೇ ಸಕಾರಾತ್ಮಕ ಕಾರ್ಯಸೂಚಿಯನ್ನು ನಿಗದಿಪಡಿಸಿದೆ ಮತ್ತು ರಾಷ್ಟ್ರಗಳ ಕೌಶಲ್ಯಗಳನ್ನು ಸಂಯೋಜಿಸುವ ಮೂಲಕ ಮಾನವೀಯತೆಯ ಒಳಿತಿಗಾಗಿ ಒಗ್ಗೂಡುವ ಕಾರ್ಯ ಮಾಡಲು ಮುಂದಾಗಿದೆ ಎಂದು ಅವರು ಹೇಳಿದ್ದಾರೆ.
ಮೊದಲ I2U2 ಶೃಂಗಸಭೆಯನ್ನು ವರ್ಚುವಲ್ ರೂಪದಲ್ಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಆಹಾರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಜಾಗತಿಕವಾಗಿ ಅಭಿವೃದ್ಧಿ ಉಪಕ್ರಮಗಳನ್ನು ಉತ್ತೇಜಿಸಲು ವೇದಿಕೆ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.
ಅನೇಕ ಪ್ರದೇಶಗಳಲ್ಲಿ ಜಂಟಿ ಯೋಜನೆಗಳನ್ನು ಗುರುತಿಸಲಾಗಿದೆ ಮತ್ತು ಅವುಗಳಲ್ಲಿ ಮುಂದುವರಿಯಲು ಮಾರ್ಗಸೂಚಿಯನ್ನು ಮಾಡಲಾಗಿದೆ ಎಂದು ಅವರು ಹೇಳಿದರು.
ಹೆಚ್ಚುತ್ತಿರುವ ಜಾಗತಿಕ ಅನಿಶ್ಚಿತತೆಗಳ ಹಿನ್ನೆಲೆಯಲ್ಲಿ ಪ್ರಾಯೋಗಿಕ ಸಹಕಾರಕ್ಕೆ ಈ ಸಹಕಾರ ಚೌಕಟ್ಟು ಉತ್ತಮ ಮಾದರಿಯಾಗಿದೆ ಎಂದು ಅವರು ಒತ್ತಿ ಹೇಳಿದರು. I2U2 ನೊಂದಿಗೆ ಜಾಗತಿಕವಾಗಿ ಇಂಧನ ಭದ್ರತೆ, ಆಹಾರ ಭದ್ರತೆ ಮತ್ತು ಆರ್ಥಿಕ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.