ಬೆಂಗಳೂರು: ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಮಹಿಳೆಯರಿಗಾಗಿ 128 ಮಹಿಳಾ ಕ್ಲಿನಿಕ್ ಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಮಹಿಳೆಯರಿಗೆಂದೇ ಪ್ರತ್ಯೇಕವಾದ ಚಿಕಿತ್ಸಾಲಯಗಳನ್ನು ಪ್ರಾರಂಭಿಸುತ್ತಿರುವುದು ದೇಶದಲ್ಲೇ ಇದು ಮೊದಲು.
ತಮ್ಮ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಮಹಿಳೆಯರಿಗೆ ಈ ಕ್ಲಿನಿಕ್ ಗಳು ಸಹಾಯಕವಾಗಲಿದೆ. ಹದಿಹರೆಯದ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳು, ಸ್ಕ್ರೀನಿಂಗ್, ಕೌನ್ಸೆಲಿಂಗ್, ಕುಟುಂಬ ಯೋಜನೆ ಮುಂತಾದ ಸಮಸ್ಯೆಗಳನ್ನು ಪರಿಹರಿಸಲು ಈ ಕ್ಲಿನಿಕ್ ಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕಿ ಡಾ.ಅರುಂಧತಿ ಚಂದ್ರಶೇಖರ್ ತಿಳಿಸಿದ್ದಾರೆ.
ಈ ಚಿಕಿತ್ಸಾಲಯಗಳು ನಗರ ಸಾರ್ವಜನಿಕ ಆರೋಗ್ಯ ಕೇಂದ್ರ ಗಳ ಭಾಗವಾಗಿರುತ್ತವೆ. ಮಹಿಳೆಯರಿಗೆ ಚಿಕಿತ್ಸೆಯ ಸಮಯದಲ್ಲಿ ಗೌಪ್ಯತೆ ಮತ್ತು ಸೌಕರ್ಯವನ್ನು ಖಚಿತಪಡಿಸಿಕೊಳ್ಳಲಾಗುತ್ತದೆ ಎಂದಿದ್ದಾರೆ.
ಕೆಲವು ಮಹಿಳೆಯರು ಸ್ತ್ರೀರೋಗ ಸಂಬಂಧಿ ಕಾಯಿಲೆಗಳ ತಪಾಸಣೆಗೆ ಪುರುಷ ವೈದ್ಯರ ಬಳಿ ಹೋಗಲು ಹಿಂದೇಟು ಹಾಕುತ್ತಾರೆ. ಇಂತಹ ಮಹಿಳೆಯರಿಗೆ ಈ ಕ್ಲಿನಿಕ್ ಗಳು ಹೆಚ್ಚು ಪ್ರಯೋಜನಕಾರಿ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.