ನವದೆಹಲಿ: ಭಾರತದ ಉನ್ನತ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಿಗೆ ಶ್ರೇಯಾಂಕ ನೀಡುವ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟನ್ನು (NIRF) ಇಂದು ಬಿಡುಗಡೆ ಮಾಡಲಾಗಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು ಬೆಳಿಗ್ಗೆ 11 ಗಂಟೆಗೆ NIRF ಇಂಡಿಯಾ ರ್ಯಾಂಕ್ಸ್ 2022 ಅನ್ನು ಬಿಡುಗಡೆ ಮಾಡಿದ್ದಾರೆ.
ಈ ಪಟ್ಟಿಯಲ್ಲಿ ಐಐಟಿ ಮದ್ರಾಸ್ ಅತ್ಯುತ್ತಮ ಶಿಕ್ಷಣ ಸಂಸ್ಥೆಯಾಗಿ ಮೊದಲ ಸ್ಥಾನ ಪಡೆದರೆ, ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ (IISc) ಸತತ 3ನೇ ವರ್ಷವೂ ಅತ್ಯುತ್ತಮ ಶಿಕ್ಷಣ ಸಂಸ್ಥೆಯಾಗಿ ಹೊರ ಹೊಮ್ಮಿದೆ.
ದಂತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ವಿಭಾಗದಲ್ಲಿ ಕಳೆದ ವರ್ಷ ಮೊದಲ ಸ್ಥಾನದಲ್ಲಿದ್ದ ಕರ್ನಾಟಕದ ಉಡುಪಿಯಲ್ಲಿರುವ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಈ ಬಾರಿ 2ನೇ ಸ್ಥಾನ ಪಡೆದಿದೆ.
ಇಂಜಿನಿಯರಿಂಗ್, ನಿರ್ವಹಣೆ, ಕಾನೂನು, ಫಾರ್ಮಸಿ, ವೈದ್ಯಕೀಯ, ದಂತ ವೈದ್ಯಕೀಯ, ವಾಸ್ತುಶಿಲ್ಪ, ಕಾಲೇಜು, ವಿಶ್ವವಿದ್ಯಾನಿಲಯಗಳು, ಸಂಶೋಧನೆ ಮುಂತಾದ 11 ವಿಭಾಗಗಳಿಗೆ ಶ್ರೇಯಾಂಕಗಳನ್ನು ವಿವಿಧ ಮಾನದಂಡಗಳಡಿ ನೀಡಲಾಗಿದೆ. ತಮ್ಮ ಪ್ರವರ್ಗದ ಶ್ರೇಯಾಂಕದಲ್ಲಿ ಅಗ್ರಸ್ಥಾನ ಪಡೆದ ಶಿಕ್ಷಣ ಸಂಸ್ಥೆಗಳ ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಸಂಸ್ಥೆಗಳನ್ನು ಅಭಿನಂದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.