ಬೆಂಗಳೂರು: ಅತಿವೃಷ್ಠಿಯಿಂದ ಹಾನಿಗೊಳಗಾದ ಮೂಲಭೂತ ಸೌಕರ್ಯಗಳ ತುರ್ತು ಮರುಸ್ಥಾಪನೆಗಾಗಿ 500 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ.
ಇಂದು ದೇವನಹಳ್ಳಿಯಲ್ಲಿ ಮಳೆ ಮತ್ತು ನೆರೆ ಹಾವಳಿ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರಿಂದ ಹಲವಾರು ಜಿಲ್ಲೆಗಳಲ್ಲಿ ಸಮಸ್ಯೆಯಾಗಿದೆ.
ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಶಾಲೆ, ಅಂಗವಾಡಿ ಕೇಂದ್ರ, ವಿದ್ಯುತ್ ಕಂಬ, ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡಗಳು ಹಾನಿಗೆ ಒಳಗಾಗಿವೆ.
ಕೆಲ ದಿನಗಳ ಹಿಂದೆ ನಾನು ಕೆಲವು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದು, ಆ ಸಂದರ್ಭದಲ್ಲಿ ಈ ಹಾನಿಯನ್ನು ಸ್ವತಃ ವೀಕ್ಷಣೆ ಮಾಡಿದ್ದೇನೆ.
ತ್ವರಿತ ಗತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಯಥಾಸ್ಥಿತಿಗೆ ತರಬೇಕಾಗಿದೆ. ಇದಕ್ಕಾಗಿ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿದೆ.
ಇದಕ್ಕಾಗಿ ಕೂಡಲೇ 500 ಕೋಟಿ ಹಣವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.