ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸೋಮವಾರದಿಂದ ಪ್ರಾರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುಂಚಿತವಾಗಿ ಇಂದು ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ.
ಸಭೆಯಲ್ಲಿ ಬಿರ್ಲಾ ಅವರು ಸದನದ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ರಾಜಕೀಯ ಪಕ್ಷಗಳ ಬೆಂಬಲವನ್ನು ಕೋರಲಿದ್ದಾರೆ.
ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ಇದೇ ತಿಂಗಳ 17ರಂದು ಮೇಲ್ಮನೆಯಲ್ಲಿ ವಿವಿಧ ಪಕ್ಷಗಳ ನಾಯಕರ ಸಭೆಯನ್ನೂ ಕರೆದಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳ ಸಹಕಾರ ಪಡೆಯಲು ಅದೇ ದಿನ ಸರ್ಕಾರ ಕೂಡ ಸರ್ವಪಕ್ಷ ಸಭೆಯನ್ನೂ ಕರೆದಿದೆ.
ಮಾನ್ಸೂನ್ ಅಧಿವೇಶನವು ಸೋಮವಾರ ಆರಂಭಗೊಂಡು ಆಗಸ್ಟ್ 12 ರವರೆಗೆ ಮುಂದುವರಿಯುತ್ತದೆ.
ಈ ಅವಧಿಯಲ್ಲಿ ರಾಷ್ಟ್ರಪತಿ ಚುನಾವಣೆ ಮತ್ತು ಉಪರಾಷ್ಟ್ರಪತಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಧಿವೇಶನ ಮಹತ್ವ ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.