News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

200 ಕೋಟಿ ಡೋಸ್‌ ಲಸಿಕೆ ನೀಡಿಕೆ: ಭಾರತ ಐತಿಹಾಸಿಕ ಸಾಧನೆ

ನವದೆಹಲಿ: ಭಾರತವು ಎರಡು ಕೋಟಿ ಕೋವಿಡ್ -19 ಲಸಿಕೆ ಡೋಸ್‌ ಅನ್ನು ತನ್ನ ನಾಗರಿಕರಿಗೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವಿಯಾ ಇಂದು ಘೋಷಿಸಿದ್ದಾರೆ. ಭಾರತದಲ್ಲಿ 16 ಜನವರಿ 2021 ರಂದು ವ್ಯಾಕ್ಸಿನೇಷನ್ ಪ್ರಾರಂಭವಾದ 18 ತಿಂಗಳ ನಂತರ ಭಾರತದ ಒಟ್ಟು ಕೋವಿಡ್-19 ಲಸಿಕೆ ಕವರೇಜ್ ಇಂದು 200 ಕೋಟಿ ದಾಟಿದೆ.

ಕೇಂದ್ರ ಆರೋಗ್ಯ ಸಚಿವರು ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ದೇಶದ ಕೋ-ವಿನ್ ವೆಬ್‌ಸೈಟ್ ಎರಡು ಬಿಲಿಯನ್ ಲಸಿಕೆ ಡೋಸ್‌ಗಳನ್ನು ಎಣಿಸುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಅದಕ್ಕೆ  “17 ಜುಲೈ 2022, ಶಾಶ್ವತವಾಗಿ ನೆನಪಿಡುವ ದಿನ. #200 ಕೋಟಿ ಲಸಿಕೆಗಳು ಎಂದು ಶೀರ್ಷಿಕೆ ನೀಡಿದ್ದಾರೆ.

“ಭಾರತವು ಇಲ್ಲಿಯವರೆಗೆ ಕೋವಿಡ್-19 ಲಸಿಕೆಯ‌ 2  ಡೋಸ್ ದಾಟಿದೆ ಎಂಬುದು ನಮಗೆ ಹೆಮ್ಮೆಯ ವಿಷಯವಾಗಿದೆ. ಈ ಸಾಧನೆಗಾಗಿ ನಾನು ಆರೋಗ್ಯ ಕಾರ್ಯಕರ್ತರು ಮತ್ತು ನಾಗರಿಕರನ್ನು ಅಭಿನಂದಿಸುತ್ತೇನೆ ”ಎಂದು ಡಾ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.

ಪ್ರಧಾನಿ ಕೂಡ ಈ ಐತಿಹಾಸಿಕ ಸಾಧನೆಯನ್ನು ಕೊಂಡಾಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top