News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯದಲ್ಲಿ 1 ಕೋಟಿ ರಾಷ್ಟ್ರಧ್ವಜ ಹಾರಿಸಲು ಸಜ್ಜಾಗಿದೆ ಸರ್ಕಾರ

ಬೆಂಗಳೂರು: ‘ಹರ್ ಘರ್ ತಿರಂಗಾ’ ಯೋಜನೆಯಡಿ ರಾಜ್ಯದಲ್ಲಿ 1 ಕೋಟಿ ರಾಷ್ಟ್ರ ಧ್ವಜ ಹಾರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಸಜ್ಜಾಗಿದೆ.

ಸರ್ಕಾರಿ, ಸರ್ಕಾರೇತರ ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ, ಪೊಲೀಸ್ ಇಲಾಖೆ ಸೇರಿ ಈಗಾಗಲೇ ಕಾರ್ಯಕ್ರಮ ಅನುಷ್ಠಾನಕ್ಕೆ ಸಭೆಗಳು ನಡೆಯುತ್ತಿದೆ ಎಂದು ಮುಖ್ಯಮಂತ್ರಿಗಳು ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ‌ನಲ್ಲಿ ತಿಳಿಸಿದರು.

ಶೇಕಡಾ 60ರಷ್ಟು ಗ್ರಾಮೀಣ ಪ್ರದೇಶ ಮತ್ತು ಶೇಕಡ 40ರಷ್ಟು ಬಿಬಿಎಂಪಿ ವ್ಯಾಪ್ತಿ ಸೇರಿ ನಗರ ಪ್ರದೇಶಗಳ ಮನೆಗಳು, ಸರ್ಕಾರಿ ಕಚೇರಿಗಳಲ್ಲಿ ಧ್ವಜ ಹಾರಿಸುವ ಮೂಲಕ ಒಂದು ಕೋಟಿ ತ್ರಿವರ್ಣ ಧ್ವಜಗಳನ್ನು ಹಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಈ ನಿಟ್ಟಿನಲ್ಲಿ ಈಗಾಗಲೇ ಸುತ್ತೋಲೆಗಳನ್ನು ಹೊರಡಿಸಲಾಗಿದೆ. ಶಾಲಾ ಕಾಲೇಜು, ಅಂಗನವಾಡಿಗಳಲ್ಲೂ ರಾಷ್ಟ್ರಧ್ವಜ ಹಾರಿಸಲು ಸಿದ್ಧತೆ ನಡೆದಿದೆ.

ಆಗಸ್ಟ್ 13 ರಿಂದ 15 ರವರೆಗೆ ಮೂರು ದಿನ ದೇಶಾದ್ಯಂತ 20 ಕೋಟಿ ರಾಷ್ಟ್ರಧ್ವಜಗಳನ್ನು ಹಾರಿಸುವ ಮಹತ್ವದ ಗುರಿಯನ್ನು ಕೇಂದ್ರ ಹೊಂದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top