News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಾಮಪತ್ರ ಸಲ್ಲಿಸಿದ ಉಪ ರಾಷ್ಟ್ರಪತಿ ಅಭ್ಯರ್ಥಿ ಜಗದೀಪ್‌ ಧನ್‌ಖರ್

ನವದೆಹಲಿ: ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನ್‌ಖರ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆಯ ನಡೆಯಲಿದ್ದು, ಎನ್‌ಡಿಎ ನಾಮನಿರ್ದೇಶಿತ ಜಗದೀಪ್ ಧನ್‌ಖರ್ ಅವರು ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವ ವಿರುದ್ಧ ಸ್ಪರ್ಧಿಸಲಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿರುವ ಧನ್‌ಖರ್ ಅವರು 1989 ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದರು. ಅವರು ಜುಲೈ 2019 ರಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾದರು ಮತ್ತು ಅಂದಿನಿಂದ ಮಮತಾ ಬ್ಯಾನರ್ಜಿ ಸರ್ಕಾರದ ಕೆಲವೊಂದು ನಿಲುವುಗಳನ್ನು ಖಂಡಿಸುತ್ತಲೇ ಬಂದಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top