News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 17th August 2022


×
Home About Us Advertise With s Contact Us

ಶ್ರೀಲಂಕಾ ಬಿಕ್ಕಟ್ಟು ಕುರಿತು ಚರ್ಚಿಸಲು ಇಂದು ಸರ್ವಪಕ್ಷ ಸಭೆ ಕರೆದ ಕೇಂದ್ರ

ನವದೆಹಲಿ: ಶ್ರೀಲಂಕಾ ಬಿಕ್ಕಟ್ಟಿನ ಕುರಿತು ಚರ್ಚಿಸಲು ಕೇಂದ್ರವು ಇಂದು ಸರ್ವಪಕ್ಷ ಸಭೆಯನ್ನು ಕರೆದಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಕಳೆದ ಭಾನುವಾರ ಸರ್ಕಾರ ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ, ದ್ವೀಪ ರಾಷ್ಟ್ರದ  ಬಿಕ್ಕಟ್ಟಿನಲ್ಲಿ ಭಾರತ ಮಧ್ಯಪ್ರವೇಶಿಸಬೇಕು ಎಂದು ಡಿಎಂಕೆ ಮತ್ತು ಎಐಎಡಿಎಂಕೆ ಒತ್ತಾಯಿಸಿದ್ದವು.

ಪ್ರಜಾಸತ್ತಾತ್ಮಕ ವಿಧಾನಗಳು ಮತ್ತು ಮೌಲ್ಯಗಳು ಹಾಗೂ ಸ್ಥಾಪಿತ ಸಂಸ್ಥೆಗಳು ಮತ್ತು ಸಾಂವಿಧಾನಿಕ ಚೌಕಟ್ಟಿನ ಮೂಲಕ ಸಮೃದ್ಧಿ ಮತ್ತು ಪ್ರಗತಿಗಾಗಿ ಶ್ರೀಲಂಕಾದ ಜನರು ತಮ್ಮ ಆಕಾಂಕ್ಷೆಗಳನ್ನು ಸಾಕಾರಗೊಳಿಸಲು ಪ್ರಯತ್ನಿಸುತ್ತಿರುವಾಗ ಭಾರತವು ಅವರೊಂದಿಗೆ ನಿಲ್ಲುವುದನ್ನು ಮುಂದುವರಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ಈ ಹಿಂದೆ ಹೇಳಿದೆ.

ವಿದೇಶಾಂಗ ವಕ್ತಾರ ಅರಿಂದಮ್ ಬಾಗ್ಚಿ ಮಾತನಾಡಿ, ಈ ವರ್ಷವೇ ಭಾರತವು ಶ್ರೀಲಂಕಾಕ್ಕೆ ಸುಮಾರು 3.8 ಶತಕೋಟಿ ಡಾಲರ್ ಮೌಲ್ಯದ ನೆರವು ಮತ್ತು ಬೆಂಬಲವನ್ನು ತ್ವರಿತವಾಗಿ ಅಂತಿಮಗೊಳಿಸಿದೆ ಮತ್ತು ತಲುಪಿಸಿದೆ ಎಂದಿದ್ದಾರೆ.

ಶ್ರೀಲಂಕಾದಲ್ಲಿ ನಾಳೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಮತದಾನ ನಡೆಯಲಿದೆ. ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಮತ್ತು ಪ್ರಮುಖ ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರು ದೇಶದ ಮುಂದಿನ ಅಧ್ಯಕ್ಷರಾಗುವ ನಾಲ್ವರು ಅಭ್ಯರ್ಥಿಗಳಲ್ಲಿ ಸೇರಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top