News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 17th August 2022


×
Home About Us Advertise With s Contact Us

‘ಜಾಗತಿಕ ಹೂಡಿಕೆದಾರರ ಶೃಂಗಸಭೆ-2023’ಗೆ ಸಜ್ಜಾಗುತ್ತಿದೆ ಯುಪಿ

ಲಕ್ನೋ: ಉತ್ತರ ಪ್ರದೇಶ  2023 ರ ಜನವರಿಯಲ್ಲಿ  ‘ಯುಪಿ ಜಾಗತಿಕ ಹೂಡಿಕೆದಾರರ ಶೃಂಗಸಭೆ’ ನಡೆಸಲಿದ್ದು, ಇದರಲ್ಲಿ 10 ಲಕ್ಷ ಕೋಟಿ ರೂಪಾಯಿ ಮೌಲ್ಯದ ಹೂಡಿಕೆಯನ್ನು ಆಕರ್ಷಿಸುವ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೋಮವಾರ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ‘ಸುಧಾರಣೆ, ಸಾಧನೆ ಮತ್ತು ಪರಿವರ್ತನೆ’ ಮಂತ್ರವನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತರ ಪ್ರದೇಶವು ದೇಶದಲ್ಲಿ ಕೈಗಾರಿಕಾ ಹೂಡಿಕೆಯ ‘ಕನಸಿನ ತಾಣ’ವಾಗಿ ಹೊರಹೊಮ್ಮಿದೆ ಎಂದು ಅವರು ಹೇಳಿದ್ದಾರೆ.

‘ಯುಪಿ ಜಾಗತಿಕ ಹೂಡಿಕೆದಾರರ ಶೃಂಗಸಭೆ-2023 ಉತ್ತರ ಪ್ರದೇಶದ ಹೊಸ ಆಕಾಂಕ್ಷೆಗಳಿಗೆ ರೆಕ್ಕೆ ನೀಡಲಿದೆ’ ಎಂದು ಆದಿತ್ಯನಾಥ್ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಶೃಂಗಸಭೆಯ ಸಿದ್ಧತೆಯ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಹೇಳಿದ್ದಾರೆ.

ಐದು ವರ್ಷಗಳ ಹಿಂದೆ, ರಾಜ್ಯದ ಆರ್ಥಿಕತೆಯು ದೇಶದಲ್ಲಿ ಐದನೇ ಅಥವಾ ಆರನೇ ಸ್ಥಾನದಲ್ಲಿತ್ತು, ಆದರೆ ಪ್ರಸ್ತುತ, ಇದು ದೇಶದ ಎರಡನೇ ಅತಿದೊಡ್ಡ ಆರ್ಥಿಕತೆ ಆಗುವತ್ತ ವೇಗವಾಗಿ ಚಲಿಸುತ್ತಿದೆ ಎಂದು  ಹೇಳಿದ್ದಾರೆ.

ಶೃಂಗಸಭೆಯ ದಿನಾಂಕಗಳನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದಿದ್ದಾರೆ.

ಯುಕೆ, ಯುಎಸ್ಎ, ಕೆನಡಾ, ಯುಎಇ, ಸ್ವೀಡನ್, ಸಿಂಗಾಪುರ್, ನೆದರ್ಲ್ಯಾಂಡ್ಸ್, ಇಸ್ರೇಲ್, ಫ್ರಾನ್ಸ್, ಜರ್ಮನಿ, ದಕ್ಷಿಣ ಕೊರಿಯಾ, ಮಾರಿಷಸ್, ರಷ್ಯಾ ಮತ್ತು ಆಸ್ಟ್ರೇಲಿಯಾದಂತಹ ದೇಶಗಳಲ್ಲಿ ರೋಡ್ ಶೋಗಳ ಮೂಲಕ ಶೃಂಗಸಭೆಯನ್ನು ವ್ಯಾಪಕವಾಗಿ ಪ್ರಚಾರ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top