News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬೆಂಕಿ ಅವಘಡ ಹಿನ್ನೆಲೆ 6,600 ಎಲೆಕ್ಟ್ರಿಕ್‌ ವಾಹನಗಳನ್ನು ಹಿಂಪಡೆಯಲಾಗಿದೆ: ಕೇಂದ್ರ

ನವದೆಹಲಿ: ಕೆಲವೆಡೆ ಎಲೆಕ್ಟ್ರಿಕ್ ವಾಹನಗಳು ಬೆಂಕಿ ಅವಘಡಕ್ಕೆ ತುತ್ತಾಗಿರುವ ಘಟನೆಗಳು ವರದಿಯಾದ ಬಳಿಕ ಮೂರು ಉತ್ಪಾದನಾ ಘಟಕಗಳು 6,600ಕ್ಕೂ ಅಧಿಕ ಎಲೆಕ್ಟ್ರಿಕ್ ವಾಹನಗಳನ್ನು ಹಿಂಪಡೆದಿವೆ ಎಂದು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವ ಕೃಷ್ಣ ಪಾಲ್ ಗುರ್ಜರ್ ಅವರು ಇಂದು ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಸಚಿವರು, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ವರದಿಯಾದ ಕೆಲವು ಬೆಂಕಿ ಅವಘಢಗಳ ನಂತರ ಎಲೆಕ್ಟ್ರಿಕ್‌ ವಾಹನಗಳ ಮಾರಾಟದಲ್ಲಿ ಯಾವುದೇ ಕುಸಿತ ಕಂಡುಬಂದಿಲ್ಲ. ಬೆಂಕಿ ಅವಘಡಗಳ ಹಿಂದಿನ ಕಾರಣಗಳನ್ನು ಪತ್ತೆ ಮಾಡಲು ರಸ್ತೆ ಮತ್ತು ಹೆದ್ದಾರಿ ಸಚಿವಾಲಯವು ಡಿಆರ್‌ಡಿಒ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್-ಬೆಂಗಳೂರು ಮತ್ತು ವಿಶಾಖಪಟ್ಟಣಂನ ನೌಕಾ ವಿಜ್ಞಾನ ಮತ್ತು ತಾಂತ್ರಿಕ ಪ್ರಯೋಗಾಲಯದ ಸ್ವತಂತ್ರ ತಜ್ಞರ ಸಮಿತಿಯನ್ನು ರಚಿಸಿದೆ ಎಂದು ಅವರು ಹೇಳಿದ್ದಾರೆ.

ಬೆಂಕಿ ಅವಘಡಗಳನ್ನು ಎದುರಿಸಿದ ಇವಿಗಳ ಸಂಬಂಧಪಟ್ಟ ತಯಾರಕರ ಸಿಇಒ ಮತ್ತು ಎಂಡಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top