News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಉತ್ಕೃಷ್ಟಗೊಳಿಸುವ ಗುರಿ: ʼರೀತಿʼ ಯೋಜನೆಗೆ 30 ಎಂಜಿನಿಯರಿಂಗ್ ಕಾಲೇಜು ಆಯ್ಕೆ

ಬೆಂಗಳೂರು: ರಾಜ್ಯದಲ್ಲಿನ 14 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳು ಸೇರಿದಂತೆ ಒಟ್ಟು 30 ಇಂಜಿನಿಯರಿಂಗ್ ಕಾಲೇಜುಗಳನ್ನು ರೀಜಿನಲ್ ಎಕೋ ಸಿಸ್ಟಮ್ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್ (ರೀತಿ) ಯೋಜನೆಗೆ ಸರ್ಕಾರ ಆಯ್ಕೆ ಮಾಡಿದ್ದು, ಮುಂದಿನ ಐದು ವರ್ಷಗಳಲ್ಲಿ ಈ ಕಾಲೇಜುಗಳನ್ನು ಅತ್ಯುತ್ಕೃಷ್ಟವಾಗಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ.

ರೀತಿ ಯೋಜನೆಗೆ ಈ ಕಾಲೇಜುಗಳನ್ನು ಆಯ್ಕೆ ಮಾಡಿರುವುದರಿಂದ ಎಲ್ಲಾ ಜಿಲ್ಲೆಗಳಲ್ಲೂ ಗುಣಮಟ್ಟದ ಇಂಜಿನಿಯರಿಂಗ್ ಶಿಕ್ಷಣ ನೀಡಲು ಸಾಧ್ಯವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ ನಾರಾಯಣ ತಿಳಿಸಿದ್ದಾರೆ.

ಜಿಲ್ಲೆಗೆ ತಲಾ ಒಂದರಂತೆ ಒಟ್ಟು 30 ಕಾಲೇಜುಗಳನ್ನು ಪ್ರಾದೇಶಿಕ ಉತ್ಕೃಷ್ಟ ತಾಂತ್ರಿಕ ಶಿಕ್ಷಣ ವ್ಯವಸ್ಥೆ (ರೀತಿ) ಯೋಜನೆಗೆ ಆಯ್ಕೆ ಮಾಡಲಾಗಿದೆ. ಇವುಗಳನ್ನು ಇನ್ಕ್ಯುಬೇಷನ್, ಎಕ್ಸಲೇಟರ್ ಮತ್ತು ಸೂಪರ್ 30 ಎನ್ನುವ ಮೂರು ವಿಭಾಗಗಳಾಗಿ ಪರಿಗಣಿಸಲಾಗಿದೆ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಮಾತ್ರ ಖಾಸಗಿ ಎಂಜಿನಿಯರಿಂಗ್ ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಪ್ರತಿಯೊಂದು ಜಿಲ್ಲೆಯಲ್ಲೂ ಅಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರದ ಗುರಿಯಾಗಿದೆ ಎಂದಿದ್ದಾರೆ.

“ಜಾಗತಿಕ ಅಗತ್ಯಗಳಿಗೆ ತಕ್ಕಂತೆ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿ ಕೇಂದ್ರಿತ ಕೌಶಲ್ಯ ಮತ್ತು ಸಂಶೋಧನಾ ಬಹು ಶಿಸ್ತಿನ ಶಿಕ್ಷಣ ಒದಗಿಸಲಾಗುವುದು. ಈ ಮೂಲಕ ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ಅರ್ಹರಾಗಿ ಮಾಡಲಾಗುವುದು” ಎಂದು ಸಚಿವರು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top