News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾಮನ್ವೆಲ್ತ್‌ನಲ್ಲಿ ಭಾಗವಹಿಸುವ ಕ್ರೀಡಾಳುಗಳ ಜೊತೆ ಮೋದಿ ಸಂವಾದ

ನವದೆಹಲಿ:  ಬರ್ಮಿಂಗ್ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ಸಂವಾದ ನಡೆಸಿ ಶುಭ ಹಾರೈಸಿದ್ದಾರೆ.

2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮೊದಲ ಬಾರಿಗೆ ಭಾಗವಹಿಸುತ್ತಿರುವ ಅಥ್ಲೀಟ್‌ಗಳು ಕೂಡ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಟಗಾರರು ಪೂರ್ಣ ಹೃದಯದಿಂದ, ಶ್ರಮವಹಿಸಿ ಆಡುವಂತೆ ಮತ್ತು ಯಾವುದೇ ಉದ್ವೇಗವಿಲ್ಲದೆ ಆಡುವಂತೆ ಮೋದಿ ಮನವಿ ಮಾಡಿದ್ದಾಋಎ. ಭಾರತೀಯ ಕ್ರೀಡಾ ಇತಿಹಾಸದಲ್ಲಿ ಇದು ಅತ್ಯಂತ ಮಹತ್ವದ ಅವಧಿಯಾಗಿದ್ದು, ತರಬೇತಿಯು ಉತ್ತಮಗೊಳ್ಳುತ್ತಿದೆ ಮತ್ತು ಕ್ರೀಡೆಯ ಬಗ್ಗೆ ದೇಶದಲ್ಲಿ ವಾತಾವರಣವೂ ಅಭುತಪೂರ್ವವಾಗಿದೆ ಎಂದಿದ್ದಾರೆ.

ಮಹತ್ವದ ಕ್ರೀಡಾಕೂಟಕ್ಕೂ ಮುಂಚಿತವಾಗಿ ಕ್ರೀಡಾಳುಗಳ ಜೊತೆ ಸಂವಾದ ನಡೆಸುವ ಮೂಲಕ ಮೋದಿಯವರು ಕ್ರೀಡಾಳುಗಳ ಆತ್ಮವಿಶ್ವಾಸವನ್ನು ವೃದ್ಧಿಸುವ ಪ್ರಯತ್ನ ಮಾಡುತ್ತಲೇ ಬರುತ್ತಿದ್ದಾರೆ. ಕ್ರೀಡಾಪಟುಗಳಲ್ಲಿ ಸ್ಪೂರ್ತಿ ತುಂಬುತ್ತಿದ್ದಾರೆ.

ಕಾಮನ್ವೆಲ್ತ್ ಕ್ರೀಡಾಕೂಟವು ಬರ್ಮಿಂಗ್ ಹ್ಯಾಮ್ ನಲ್ಲಿ ಜುಲೈ 28ರಂದು ಆರಂಭವಾಗಲಿದೆ. ಆಗಸ್ಟ್ 8ರಂದು ಮುಕ್ತಾಯವಾಗಲಿದೆ. ಇದರಲ್ಲಿ ಭಾರತದ 215 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಅವರೊಂದಿಗೆ 107 ಅಧಿಕಾರಿಗಳು, ಸಹಾಯಕ ಸಿಬ್ಬಂದಿಗಳು ಕೂಡ ತೆರಳುತ್ತಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top