News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೇಶದ 5.97 ಲಕ್ಷ ಗ್ರಾಮಗಳ ಪೈಕಿ 5.72 ಲಕ್ಷ ಮೊಬೈಲ್ ವ್ಯಾಪ್ತಿಗೆ ಒಳಪಟ್ಟಿವೆ: ಕೇಂದ್ರ

ನವದೆಹಲಿ: ದೇಶದ 5.72 ಲಕ್ಷ ಜನವಸತಿ ಗ್ರಾಮಗಳ ಪೈಕಿ ಸುಮಾರು 5.72 ಲಕ್ಷ ಹಳ್ಳಿಗಳು ಮೊಬೈಲ್ ವ್ಯಾಪ್ತಿಗೆ ಒಳಪಟ್ಟಿವೆ ಎಂದು ಸರ್ಕಾರ ಬುಧವಾರ  ಸಂಸತ್ತಿಗೆ ಮಾಹಿತಿ ನೀಡಿದೆ.

“ದೇಶದ ದೂರದ ಹಳ್ಳಿಗಳಲ್ಲಿ ಹಂತ ಹಂತವಾಗಿ ಸರ್ಕಾರ ಮತ್ತು ಟೆಲಿಕಾಂ ಸೇವಾ ಪೂರೈಕೆದಾರರು  ಮೊಬೈಲ್ ಸಂಪರ್ಕವನ್ನು ವಿಸ್ತರಿಸಿದ್ದಾರೆ” ಎಂದು ಕೇಂದ್ರ ಸಂವಹನ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

“ಟೆಲಿಕಾಂ ಸೇವಾ ಪೂರೈಕೆದಾರರು ಮತ್ತು ದೂರಸಂಪರ್ಕ ಇಲಾಖೆಯ ಕ್ಷೇತ್ರ ಘಟಕಗಳು ಒದಗಿಸಿದ ಮಾಹಿತಿಯ ಪ್ರಕಾರ, ದೇಶದ 5,97,618 ಜನವಸತಿ ಗ್ರಾಮಗಳಲ್ಲಿ  5,72,551 ಹಳ್ಳಿಗಳು ಮೊಬೈಲ್ ವ್ಯಾಪ್ತಿಗೆ ಒಳಪಟ್ಟಿವೆ ಮತ್ತು 25,067 ಹಳ್ಳಿಗಳನ್ನು ಮೊಬೈಲ್‌ಗೆ ಒಳಪಡದ ಗ್ರಾಮಗಳು ಎಂದು ಗುರುತಿಸಲಾಗಿದೆ”ಎಂದು ಸಚಿವರು ಹೇಳಿದ್ದಾರೆ.

ಮೊಬೈಲ್ ವ್ಯಾಪ್ತಿಗೆ ಒಳಪಡದ ಹಳ್ಳಿಗಳಲ್ಲಿ ಮೊಬೈಲ್ ಸೇವೆಗಳನ್ನು ಒದಗಿಸಲು ಸರ್ಕಾರವು ಯುನಿವರ್ಸಲ್ ಸರ್ವಿಸ್ ಆಬ್ಲಿಗೇಶನ್ ಫಂಡ್ (USOF) ನ ಧನಸಹಾಯದೊಂದಿಗೆ ಈಶಾನ್ಯ ಪ್ರದೇಶ, ಎಡಪಂಥೀಯ ಉಗ್ರವಾದ ಪೀಡಿತ ಪ್ರದೇಶಕ್ಕಾಗಿ ಸಮಗ್ರ ಟೆಲಿಕಾಂ ಅಭಿವೃದ್ಧಿ ಯೋಜನೆಯನ್ನು ಅನುಮೋದಿಸಿದೆ ಎಂದು ಅವರು ಹೇಳಿದರು.

ಸರ್ಕಾರದ ಭಾರತ್ ನೆಟ್ ಯೋಜನೆಯನ್ನು ಉಲ್ಲೇಖಿಸಿದ ಸಚಿವರು, ದೇಶದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ಒದಗಿಸಲು ಕಾರ್ಯಕ್ರಮವನ್ನು ಹಂತ ಹಂತವಾಗಿ ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top