News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾಶ್ಮೀರದಲ್ಲಿ ಉಗ್ರರ ದಾಳಿ 2018ರ 417ರಿಂದ 2021ರಲ್ಲಿ 229ಕ್ಕೆ ಕುಸಿದಿದೆ

ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳು ನಿರಂತರ ಕುಸಿತವಾಗುತ್ತಿದ್ದು, ಭದ್ರತಾ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಿದೆ.

ಕಣಿವೆ ರಾಜ್ಯದಲ್ಲಿ 2018 ರಲ್ಲಿ ನಡೆದ 417 ಭಯೋತ್ಪಾದಕ ದಾಳಿಗಳಿಗೆ ಹೋಲಿಸಿದರೆ 2021 ರಲ್ಲಿ ಭಯೋತ್ಪಾದಕ ದಾಳಿಗಳ ಸಂಖ್ಯೆ 229 ಕ್ಕೆ ಗಣನೀಯವಾಗಿ ಕಡಿಮೆಯಾಗಿದೆ. ಅಂತೆಯೇ, ನಾಗರಿಕರ ಮೇಲಿನ ದಾಳಿಗಳು 2018 ರಲ್ಲಿ 33 ರಿಂದ 2021 ರಲ್ಲಿ 12 ಕ್ಕೆ ಕಡಿಮೆಯಾಗಿದೆ.

ನಿನ್ನೆ ರಾಜ್ಯಸಭೆಯಲ್ಲಿ ಈ ಬಗ್ಗೆ ಲಿಖಿತ ಉತ್ತರ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್‌ ಅವರು ಈ ವಿಷಯ ತಿಳಿಸಿದ್ದಾರೆ.

“ಇತ್ತೀಚಿನ ತಿಂಗಳುಗಳಲ್ಲಿ ಕಾಶ್ಮೀರಿ ಪಂಡಿತರ ಮೇಲಿನ ದಾಳಿಗಳ ಹಿನ್ನೆಲೆಯಲ್ಲಿ ಕಣಿವೆಯಲ್ಲಿ ಅಲ್ಪಸಂಖ್ಯಾತರ ಸುರಕ್ಷತೆಗಾಗಿ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.  ದೃಢವಾದ ಭದ್ರತೆ ಮತ್ತು ಗುಪ್ತಚರ ಗ್ರಿಡ್, ಹಗಲು ಮತ್ತು ರಾತ್ರಿ ವೇಳೆ ಗಸ್ತು, ಭಯೋತ್ಪಾದಕರ ವಿರುದ್ಧ ಹದ್ದಿನ ಕಣ್ಣು ಮತ್ತು ಪೂರ್ವಭಾವಿ ಕಾರ್ಯಾಚರಣೆಗಳು ಮತ್ತು ರಾತ್ರಿಯಿಡೀ ತಪಾಸಣೆ ಮುಂತಾದ ಕಾರ್ಯಗಳನ್ನು ಸಮರ್ಪಕವಾದ ರೀತಿಯಲ್ಲಿಅನುಷ್ಠಾನಕ್ಕೆ ತರಲಾಗಿದೆ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top