News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶಾಲೆಯಲ್ಲಿ ಬಿಸಿಯೂಟದ ಜೊತೆ ಸಿಗಲಿದೆ ಶೇಂಗಾ ಚಿಕ್ಕಿ, ಮೊಟ್ಟೆ, ಬಾಳೆಹಣ್ಣು

ಬೆಂಗಳೂರು:  ಸರ್ಕಾರಿ, ಅನುದಾನಿತ ಶಾಲೆಯ  1-8 ನೇ ತರಗತಿಯ ವಿದ್ಯಾರ್ಥಿಗಳಿಗೆ ‘ಪಿಎಂ ಪೋಷಣ್ ಶಕ್ತಿ ನಿರ್ಮಾಣ್’ ಭಾಗವಾಗಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಮೊಟ್ಟೆ, ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಗಳನ್ನು  ಸೇರಿಸಲು ಸರ್ಕಾರ  ನಿರ್ಧರಸಿದೆ.

ಎಲ್ಲಾ ಜಿಲ್ಲೆಯ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 46 ದಿನಗಳ ಕಾಲ ಇವುಗಳನ್ನು ವಿತರಿಸಲು ನಿರ್ಧರಿಸಲಾಗಿದೆ.

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಲ್ಯಾಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಫ್ಲೆಕ್ಸಿ ಅನುದಾನದಡಿ ಪೂರಕ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮವನ್ನು 46 ದಿನಗಳ ಕಾಲ ಅನುಷ್ಠಾನಗೊಳಿಸಿತ್ತು. ಇದು ಯಶಸ್ವಿಯಾದ ಹಿನ್ನೆಲೆಯಲ್ಲಿ 100 ದಿನ ಈ ಆಹಾರಗಳನ್ನು ಮಕ್ಕಳಿಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ವಿಶಾಲ್ ಆರ್ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ಸರ್ಕಾರ 46 ದಿನಗಳಿಗೆ ಅನುಮೋದನೆ ನೀಡಿದೆ.

ಶಿಕ್ಷಣ ಸಚಿವ ಬಿ ಸಿ ನಾಗೇಶ್ ಈ ಬಗ್ಗೆ ಮಾಹಿತಿ ನೀಡಿ, ಯಾವುದೇ ವಿದ್ಯಾರ್ಥಿಗೆ ಬಲವಂತವಾಗಿ ಮೊಟ್ಟೆ ಸೇವಿಸುವಂತೆ ಒತ್ತಾಯಿಸುವುದಿಲ್ಲ, ಸಸ್ಯಾಹಾರಿಗಳು ಚಿಕ್ಕಿ ಮತ್ತು ಬಾಳೆಹಣ್ಣು ಮಾತ್ರ ಆಯ್ಕೆ ಮಾಡಿಕೊಳ್ಳಬಹುದು ಎಂದು ಸ್ಪಷ್ಟನೆ ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top