News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಉನ್ನತ ಸಚಿವರ ಜೊತೆ ಮೋದಿ ಸಭೆ: ಸಂಸತ್ತಿನಲ್ಲಿ ಸರ್ಕಾರದ ಕಾರ್ಯತಂತ್ರದ ಬಗ್ಗೆ ಚರ್ಚೆ

ನವದೆಹಲಿ: ಸಂಸತ್ತಿನಲ್ಲಿ ಸರ್ಕಾರದ ಕಾರ್ಯತಂತ್ರದ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉನ್ನತ ಸಚಿವರೊಂದಿಗೆ ಸಭೆ ನಡೆಸಿದರು. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅನುರಾಗ್ ಠಾಕೂರ್ ಮತ್ತು ಕಿರಣ್ ರಿಜಿಜು ಸಭೆಯಲ್ಲಿ ಉಪಸ್ಥಿತರಿದ್ದರು.

ಬೆಲೆ ಏರಿಕೆ ಮತ್ತು ದೈನಂದಿನ ಬಳಕೆಯ ಕೆಲವು ವಸ್ತುಗಳ ಮೇಲೆ ಸರ್ಕಾರವು ಜಿಎಸ್‌ಟಿ ವಿಧಿಸಿರುವುದಕ್ಕೆ  ಸಂಬಂಧಿಸಿದಂತೆ ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ಗದ್ದಲ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.

ಮತ್ತೊಂದೆಡೆ, ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲಾ ವಿರೋಧ ಪಕ್ಷಗಳ  ನಾಯಕರು ಇಂದು ಸಂಸತ್ತಿನಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಬೆಲೆ ಏರಿಕೆ, ಜಿಎಸ್‌ಟಿ ಸಂಬಂಧಿಸಿದಂತೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾರ್ಯತಂತ್ರ ರೂಪಿಸಿವೆ.

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 18 ರಂದು ಪ್ರಾರಂಭವಾಗಿದೆ ಮತ್ತು ಆಗಸ್ಟ್ 12 ರವರೆಗೆ ಮುಂದುವರಿಯುತ್ತದೆ. ಅಧಿವೇಶನದಲ್ಲಿ 18 ಅಧಿವೇಶನಗಳು ನಡೆಯಲಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top