News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ʼಇಂಡಿಯಾ ಇನ್ನೋವೇಶನ್ ಇಂಡೆಕ್ಸ್ 2021ʼ: ಕರ್ನಾಟಕಕ್ಕೆ ಅಗ್ರಸ್ಥಾನ

ನವದೆಹಲಿ: ನೀತಿ ಆಯೋಗವು ಇಂದು ಮೂರನೇ ʼಇಂಡಿಯಾ ಇನ್ನೋವೇಶನ್ ಇಂಡೆಕ್ಸ್ 2021ʼ ಅನ್ನು ಬಿಡುಗಡೆ ಮಾಡಿದ್ದು, ಪ್ರಮುಖ ರಾಜ್ಯಗಳ ಪೈಕಿ ಕರ್ನಾಟಕ, ತೆಲಂಗಾಣ ಮತ್ತು ಹರಿಯಾಣ ಆಯಾ ವಿಭಾಗಗಳಲ್ಲ ಮೊದಲ ಮೂರು ಅಗ್ರ ರಾಜ್ಯಗಳಾಗಿ ಹೊರಹೊಮ್ಮಿವೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಅವುಗಳ ಕಾರ್ಯಕ್ಷಮತೆಗೆ ಅನುಗುಣವಾಗಿ ಪರಿಣಾಮಕಾರಿಯಾಗಿ ಹೋಲಿಸಲು ’17 ಪ್ರಮುಖ ರಾಜ್ಯಗಳು’, ’10 ಈಶಾನ್ಯ ಮತ್ತು ಗುಡ್ಡಗಾಡು ರಾಜ್ಯಗಳು’ ಮತ್ತು ‘9 ಕೇಂದ್ರಾಡಳಿತ ಪ್ರದೇಶಗಳು ಮತ್ತು ನಗರ ರಾಜ್ಯಗಳು’ ಎಂದು ಸೂಚ್ಯಂಕದಲ್ಲಿ ವಿಂಗಡಿಸಲಾಗಿದೆ.

ಕರ್ನಾಟಕವು ‘ಪ್ರಮುಖ ರಾಜ್ಯಗಳು’ ವಿಭಾಗದಲ್ಲಿ ಅಗ್ರಸ್ಥಾನದಲ್ಲಿದ್ದರೆ, ‘ಈಶಾನ್ಯ ಮತ್ತು ಗುಡ್ಡಗಾಡು ರಾಜ್ಯಗಳು’ ವಿಭಾಗದಲ್ಲಿ ಮಣಿಪುರ ಅಗ್ರಸ್ಥಾನದಲ್ಲಿದೆ ಮತ್ತು ‘ಕೇಂದ್ರಾಡಳಿತ ಪ್ರದೇಶಗಳು ಮತ್ತು ನಗರ ರಾಜ್ಯಗಳು’ ವಿಭಾಗದಲ್ಲಿ ಚಂಡೀಗಢವು ಅಗ್ರಸ್ಥಾನದಲ್ಲಿದೆ.

ಕರ್ನಾಟಕ ಸತತ ಮೂರನೇ ವರ್ಷವೂ ಸೂಚ್ಯಂಕದಲ್ಲಿ ಅಗ್ರಸ್ಥಾನದಲ್ಲಿದೆ. ಇಂಡಿಯಾ ಇನ್ನೋವೇಶನ್ ಇಂಡೆಕ್ಸ್‌ನ ಮೊದಲ ಮತ್ತು ಎರಡನೇ ಆವೃತ್ತಿಗಳನ್ನು ಕ್ರಮವಾಗಿ ಅಕ್ಟೋಬರ್ 2019 ಮತ್ತು ಜನವರಿ 2021 ರಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರಲ್ಲೂ ಕರ್ನಾಟಕ ಅಗ್ರಸ್ಥಾನದಲ್ಲಿ ಇತ್ತು.

ಹಿಂದಿನ ಆವೃತ್ತಿಯಲ್ಲಿ ಬಳಸಿದ 36 ಸೂಚಕಗಳಿಗೆ ಹೋಲಿಸಿದರೆ, ಈ ಬಾರಿ ಸೂಚ್ಯಂಕ ಸಿದ್ಧಪಡಿಸುವಲ್ಲಿ 66 ವಿಶಿಷ್ಟ ಸೂಚಕಗಳನ್ನು ಪರಿಚಯಿಸಲಾಗಿದೆ. ಇದು ಭಾರತದಲ್ಲಿ ನಾವೀನ್ಯತೆಯ ಕಾರ್ಯಕ್ಷಮತೆಯನ್ನು ಅಳೆಯಲು ಹೊಸ ಚೌಕಟ್ಟು, ಹೆಚ್ಚು ಸೂಕ್ಷ್ಮ ಮತ್ತು ಸಮಗ್ರ ದೃಷ್ಟಿಕೋನವನ್ನು ಪ್ರಸ್ತುತಪಡಿಸುತ್ತದೆ.

ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ವರನ್ ಅಯ್ಯರ್ ಅವರ ಉಪಸ್ಥಿತಿಯಲ್ಲಿ ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೆರಿ ಅವರು ಬಿಡುಗಡೆ ಮಾಡಿದ ಸೂಚ್ಯಂಕವನ್ನು ಜಾಗತಿಕ ಆವಿಷ್ಕಾರ ಸೂಚ್ಯಂಕದ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top