News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಫಿಟ್‌ ಇಂಡಿಯಾ, ಖೇಲೋ ಇಂಡಿಯಾ ಅತ್ಯಂತ ಯಶಸ್ವಿಯಾಗಿದೆ: ಠಾಕೂರ್

ನವದೆಹಲಿ: ಫಿಟ್ ಇಂಡಿಯಾ ಅಭಿಯಾನ ಮತ್ತು ಖೇಲೋ ಇಂಡಿಯಾ ಅತ್ಯಂತ ಯಶಸ್ವಿಯಾಗಿದೆ ಎಂದು ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ನಿನ್ನೆ ಸಂಜೆ ಮುಂಬೈನಲ್ಲಿ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಆಯೋಜಿಸಿದ್ದ ಫಿಟ್ ಇಂಡಿಯಾ ರಸಪ್ರಶ್ನೆ, ರಾಜ್ಯ ಮಟ್ಟದ ವಿಜೇತರ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಫಲವಾಗಿ ಫಿಟ್ ಇಂಡಿಯಾ ಅಭಿಯಾನ ಆರಂಭಿಸಲಾಗಿದ್ದು, ದೇಶದ ಯುವಕರನ್ನು ಮಾನಸಿಕ ಹಾಗೂ ದೈಹಿಕವಾಗಿ ಸದೃಢರನ್ನಾಗಿಸುವ ಚಿಂತನೆ ಇದರ ಹಿಂದಿದೆ ಎಂದಿದ್ದಾರೆ.

ಫಿಟ್ ಇಂಡಿಯಾ ರಸಪ್ರಶ್ನೆಯಲ್ಲಿ 626 ಜಿಲ್ಲೆಗಳಿಂದ 13,502 ಶಾಲೆಗಳು ಮತ್ತು 36, 299 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ ಎಂದು  ಠಾಕೂರ್ ಹೇಳಿದ್ದಾರೆ. ಫಿಟ್ ಇಂಡಿಯಾ ರಸಪ್ರಶ್ನೆಯಲ್ಲಿ ವಿಜೇತರು ಕ್ರೀಡೆ ಮತ್ತು ಫಿಟ್‌ನೆಸ್‌ನ ರಾಯಭಾರಿಗಳು ಎಂದು ಅವರು ಬಣ್ಣಿಸಿದ್ದಾರೆ.

ದೇಶದಾದ್ಯಂತ 72 ವಿದ್ಯಾರ್ಥಿಗಳು ಮತ್ತು 36 ಶಾಲೆಗಳಿಗೆ 99 ಲಕ್ಷ ರೂಪಾಯಿ ಮೊತ್ತದ ಬಹುಮಾನವನ್ನು ನೀಡಲಾಯಿತು. ಫೆಬ್ರವರಿ ಮತ್ತು ಮಾರ್ಚ್ 2022 ರಲ್ಲಿ ನಡೆದ ರಾಜ್ಯ ವಿಭಾಗದಲ್ಲಿ 360 ಶಾಲೆಗಳು ಸ್ಪರ್ಧಿಸಿದ್ದವು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top