News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹರ್‌ ಘರ್‌ ತಿರಂಗಾ ಅಭಿಯಾನ ಬಲಪಡಿಸಲು ಮೋದಿ ಕರೆ

ನವದೆಹಲಿ: ಈ ವರ್ಷ ರಾಷ್ಟ್ರವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರಲ್ಲಿ ದೇಶಭಕ್ತಿಯನ್ನು ಉದ್ದೀಪನಗೊಳಿಸಲು  ಕೇಂದ್ರ ಸರ್ಕಾರವು ಹರ್ ಘರ್ ತಿರಂಗಾ ಅಭಿಯಾನವನ್ನು ಆಯೋಜನೆಗೊಳಿಸಿದೆ. ಮನೆ ಮನೆಗಳಲ್ಲಿ ತಿರಂಗಾ ಹಾರಾಡುವಂತೆ ಮಾಡುವುದು ಈ ಅಭಿಯಾನದ ಉದ್ದೇಶವಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹರ್‌ ಘರ್‌ ತಿರಂಗಾ ಅಭಿಯಾನವನ್ನು ಬಲಪಡಿಸುವಂತೆ ದೇಶದ ಜನರಿಗೆ ಕರೆ ನೀಡಿದ್ದಾರೆ.

ಟ್ವೀಟ್‌ ಮಾಡಿರುವ ಮೋದಿ ಅವರು,  ಆಗಸ್ಟ್ 13 ಮತ್ತು 15 ರ ನಡುವೆ ಮನೆಗಳಲ್ಲಿ ತಿರಂಗಾ ಹಾರಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಈ ಅಭಿಯಾನವು ರಾಷ್ಟ್ರಧ್ವಜದೊಂದಿಗಿನ ನಮ್ಮ ಬೆಸುಗೆಯನ್ನು ಇನ್ನಷ್ಟು ಗಾಢಗೊಳಿಸುತ್ತದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.

ನಮ್ಮ ಇತಿಹಾಸದಲ್ಲಿ ಜುಲೈ 22ಕ್ಕೆ ವಿಶೇಷವಾದ ಪ್ರಸ್ತುತತೆ ಇದೆ ಎಂದ ಪ್ರಧಾನಿ, 1947ರಲ್ಲಿ ಇದೇ ದಿನ ನಮ್ಮ ರಾಷ್ಟ್ರಧ್ವಜವನ್ನು ಅಂಗೀಕರಿಸಲಾಯಿತು ಎಂದರು. ನಮ್ಮ ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಸಮಿತಿಯ ವಿವರಗಳು ಮತ್ತು ಪಂಡಿತ್ ನೆಹರೂ ಅವರು ಹಾರಿಸಿದ ಮೊದಲ ತ್ರಿವರ್ಣ ಧ್ವಜ ಸೇರಿದಂತೆ ಇತಿಹಾಸದ ಕೆಲವು ಆಸಕ್ತಿದಾಯಕ ವಿಷಯಗಳನ್ನು ಮೋದಿ ಟ್ವಿಟ್‌ ಮೂಲಕ ಹಂಚಿಕೊಂಡಿದ್ದಾರೆ.

ನಾವು ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡುತ್ತಿದ್ದಾಗ ಸ್ವತಂತ್ರ ಭಾರತಕ್ಕಾಗಿ ಧ್ವಜದ ಕನಸು ಕಂಡವರೆಲ್ಲರ ಧೈರ್ಯ ಮತ್ತು ಪ್ರಯತ್ನಗಳನ್ನು ಇಂದು ಸ್ಮರಿಸಿಕೊಳ್ಳುತ್ತೇವೆ ಎಂದು ಪ್ರಧಾನಿ ಹೇಳಿದರು. ಅವರ ದೂರದೃಷ್ಟಿಯನ್ನು ಈಡೇರಿಸುವ ಮತ್ತು ಅವರ ಕನಸಿನ ಭಾರತವನ್ನು ನಿರ್ಮಿಸುವ ಬದ್ಧತೆಯನ್ನು ಸರ್ಕಾರ ಪುನರುಚ್ಚರಿಸಿದೆ ಎಂದಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top