News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಯುಪಿ: ಸರ್ಕಾರಿ ನೌಕರರಿಗೆ ನಗದು ರಹಿತ ವೈದ್ಯಕೀಯ ಸೇವೆ ಯೋಜನೆ ತಂದ ಯೋಗಿ

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 22 ಲಕ್ಷ ರಾಜ್ಯ ಸರ್ಕಾರಿ ನೌಕರರು, ಪಿಂಚಣಿದಾರರು ಮತ್ತು ಅವರ ಅವಲಂಬಿತರು ಸೇರಿದಂತೆ 75 ಲಕ್ಷಕ್ಕೂ ಹೆಚ್ಚು ಜನರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಯೋಜನೆಗೆ ಚಾಲನೆ ನೀಡಿದ್ದಾರೆ.

ದೀನ್ ದಯಾಳ್ ಉಪಾಧ್ಯಾಯ ರಾಜ್ಯ ನೌಕರರ ನಗದು ರಹಿತ ವೈದ್ಯಕೀಯ ಯೋಜನೆಯಡಿ, ಅರ್ಹರು ಯಾವುದೇ ಹಣಕಾಸಿನ ಮಿತಿಯಿಲ್ಲದೆ ಸರ್ಕಾರಿ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ನಗದು ರಹಿತ ವೈದ್ಯಕೀಯ ಸೌಲಭ್ಯಗಳನ್ನು ಪಡೆಯುತ್ತಾರೆ ಎಂದು ಗುರುವಾರ ಹೊರಡಿಸಿದ ಸರ್ಕಾರದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಆಯುಷ್ಮಾನ್ ಭಾರತ್ ಯೋಜನೆಯಡಿ ಎಂಪನೆಲ್ ಮಾಡಲಾದ ಆಸ್ಪತ್ರೆಗಳಲ್ಲಿ ರೂ 5 ಲಕ್ಷದವರೆಗೆ ನಗದು ರಹಿತ ವೈದ್ಯಕೀಯ ಸೌಲಭ್ಯಗಳು ಲಭ್ಯವಿರುತ್ತವೆ.

ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಯೋಜನೆಗೆ ಚಾಲನೆ ನೀಡಿದ ಸಿಎಂ, ಅರ್ಹ ಉದ್ಯೋಗಿ ಮತ್ತು ಪಿಂಚಣಿದಾರರಿಗೆ ರಾಜ್ಯ ಆರೋಗ್ಯ ಕಾರ್ಡ್ ನೀಡಲಾಗುವುದು ಎಂದು ಹೇಳಿದರು.  ರಾಜ್ಯ ಆರೋಗ್ಯ ಕಾರ್ಡ್ ಅನ್ನು ಜನರು ತಾವಾಗಿಯೇ ಡೌನ್‌ಲೋಡ್ ಮಾಡಿಕೊಳ್ಳಲು ಮತ್ತು ಸರ್ಕಾರಿ ಅಥವಾ ಎಂಪನೆಲ್ಡ್ ಆಸ್ಪತ್ರೆಗಳಲ್ಲಿ ನಗದು ರಹಿತ ವೈದ್ಯಕೀಯ ಚಿಕಿತ್ಸೆಯ ಪ್ರಯೋಜನವನ್ನು ಪಡೆಯಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top